ಗರ್ಭಿಣಿಯರಿಗೆ ಆರೋಗ್ಯದ ಕಾಳಜಿ ಮುಖ್ಯ: ಡಾ ಎನ್ ಟಿ ಶ್ರೀನಿವಾಸ್

KannadaprabhaNewsNetwork |  
Published : Jan 11, 2024, 01:30 AM ISTUpdated : Jan 11, 2024, 03:26 PM IST
ಕೂಡ್ಲಿಗಿ  ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ  ಮಂಗಳವಾರ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು,  ಕೂಡ್ಲಿಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದೊಂದಿಗೆ ಗರ್ಭಿಣಿಯಿಂದ ಮಗುವಿಗೆ  ಎಚ್ಐವಿ ಸಿಪಿಲಿಸ್ ಹೆಪಟೈಟಿಸ್ ನಿರ್ಮೂಲನೆಗಾಗಿ   ಆಯೋಜಿಸಿದ್ದ  ಸೀಮಂತ ಕಾರ್ಯಕ್ರಮವನ್ನು ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಚಾಲನೆ ನೀಡಿದರು. ಗರ್ಭಿಣಿಯರಿಗೆ ಇದೇ ಸಂದರ್ಭದಲ್ಲಿ ಸೀಮಂತ ಮಾಡಲಾಯಿತು. | Kannada Prabha

ಸಾರಾಂಶ

ಎಚ್ಐವಿ ಸಿಪಿಲಿಸ್ ಹುಟ್ಟುವ ಮಕ್ಕಳಿಗೆ ಹರಡದಂತೆ ಕ್ರಮ ಕೈಗೊಳ್ಳುವಲ್ಲಿ ವೈದ್ಯರು ಮುಂದಾಗಬೇಕು. ಗರ್ಭಿಣಿಯರಿಗೆ ಆರೋಗ್ಯದ ಬಗ್ಗೆ ಅರಿವು ಅತಿ ಮುಖ್ಯ. ಗರ್ಭಿಣಿಯರಿಗೆ ವೈದ್ಯರು ಅರಿವು ಮೂಡಿಸಬೇಕು.

ಕೂಡ್ಲಿಗಿ: ತಾಯಿಯಿಂದ ಮಗುವಿಗೆ ಎಚ್ಐವಿ ಸೋಂಕು ಮತ್ತು ಸಿಫಲಿಸ್ ಹೆಪಟೈಟಿಸ್ ಹರಡದಂತೆ ಪರೀಕ್ಷೆಗಳನ್ನು ಮಾಡಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡರೆ ಹುಟ್ಟುವ ಮಕ್ಕಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಶಾಸಕ ಡಾ. ಎನ್ ಟಿ. ಶ್ರೀನಿವಾಸ್ ತಿಳಿಸಿದರು.

ಮಂಗಳವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದೊಂದಿಗೆ ತಾಯಿಯಿಂದ ಮಗುವಿಗೆ ಎಚ್ಐವಿ ಸಿಪಿಲಿಸ್ ಹೆಪಟೈಟಿಸ್ ನಿರ್ಮೂಲನೆಗಾಗಿ ಗರ್ಭಿಣಿಯರಿಗೆ ಆಯೋಜಿಸಿದ್ದ ಸೀಮಂತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಎಚ್ಐವಿ ಸಿಪಿಲಿಸ್ ಹುಟ್ಟುವ ಮಕ್ಕಳಿಗೆ ಹರಡದಂತೆ ಕ್ರಮ ಕೈಗೊಳ್ಳುವಲ್ಲಿ ವೈದ್ಯರು ಮುಂದಾಗಬೇಕು. ಗರ್ಭಿಣಿಯರಿಗೆ ಆರೋಗ್ಯದ ಬಗ್ಗೆ ಅರಿವು ಅತಿ ಮುಖ್ಯ. ಗರ್ಭಿಣಿಯರಿಗೆ ವೈದ್ಯರು ಅರಿವು ಮೂಡಿಸಬೇಕು ಎಂದರು.

ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಧು ಮಾತನಾಡಿ, ಹೆಪಟೈಟಿಸ್ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಎಸ್.ಪಿ. ಪ್ರದೀಪ್ ಕುಮಾರ್ ಮಾತನಾಡಿ, ಗರ್ಭಿಣಿಯಾದಾಗಿನಿಂದ ಹೆರಿಗೆ ಆಗುವ ತನಕ ಸೂಕ್ತ ತಪಾಸಣೆ ಮಾಡಿಸಿದರೆ ಹುಟ್ಟುವ ಮಕ್ಕಳು ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ. ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಿದರೆ ಗರ್ಭಿಣಿಯರು ಸಹ ಸುರಕ್ಷಿತವಾಗಿ ಇರುತ್ತಾರೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ನಾಯ್ಕ, ಆಪ್ತ ಸಮಾಲೋಚಕರಾದ ಕೆ. ಪ್ರಶಾಂತ್ ಕುಮಾರ್, ನಾಗರತ್ನ, ಗಂಗಮ್ಮ, ಜೆ.ಜಿ. ಸೋಮಶೇಖರ್, ಗಂಗಮ್ಮ, ಪತ್ರಿಗೌಡ, ದೇವಮ್ಮ, ಉಮಾ, ರೇಣುಕಾ, ತಿಪ್ಪೇಸ್ವಾಮಿ, ನಾಗರಾಜ ಇದ್ದರು. ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ಗರ್ಭಿಣಿಯರು, ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌