ಆಸ್ಪತ್ರೆಯಿಂದ ಆರೋಗ್ಯ ತಪಾಸಣಾ ಶಿಬಿರ

KannadaprabhaNewsNetwork |  
Published : Jun 29, 2025, 01:33 AM IST
 ಪ್ರಾಥಮಿಕ ಆರೋಗ್ಯ ಕೇಂದ್ರ ಬಾಗಿವಾಳು ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣದ ಸಹಯೋಗದೊಂದಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. | Kannada Prabha

ಸಾರಾಂಶ

ಪ್ರಾಥಮಿಕ ಆರೋಗ್ಯ ಕೇಂದ್ರ ಬಾಗಿವಾಳು ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣದ ಸಹಯೋಗದೊಂದಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಸರ್ಕಾರಿ ಆಸ್ಪತ್ರೆ ಎಂದರೆ ಕೆಲವರಿಗೆ ಅಸಭ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆಯು ಲಭ್ಯವಿರುತ್ತದೆ, ವಿಶೇಷವಾಗಿ ಮಹಿಳೆಯರಿಗೆ ಗರ್ಭಿಣಿಯ ಸಂದರ್ಭದಲ್ಲಿ ಬೇಕಾಗುವ ಎಲ್ಲಾ ವೈದ್ಯಕೀಯ ಸೇವೆಗಳು ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಯಾವುದೇ ಸಂದರ್ಭದಲ್ಲಿ ನಿಮಗೆ ಆರೋಗ್ಯಕ್ಕೆ ಸಮಸ್ಯೆ ಎಂದನಿಸಿದರೆ ತಕ್ಷಣ ವೈದ್ಯರನ್ನು ಕಾಣಬೇಕು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪ್ರಾಥಮಿಕ ಆರೋಗ್ಯ ಕೇಂದ್ರ ಬಾಗಿವಾಳು ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣದ ಸಹಯೋಗದೊಂದಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಚ್. ಜಿ ಭರತ್ ಕುಮಾರ್, ಕಾರ್ಯಕ್ರಮವು ಅದ್ಭುತ ಮತ್ತು ವಿಶೇಷ. ಯಾವುದೇ ಸಮುದಾಯ ಅಥವಾ ಜಾತಿ, ಮತ, ಭೇದ, ಕುಲ, ಇಲ್ಲದೆ ಸರ್ವರಿಗೂ ಸಮಾನರು ಎಂಬುವ ಉದ್ದೇಶದಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಾಗಿವಾಳು ಆಸ್ಪತ್ರೆಯಲ್ಲಿ ಸುಮಾರು 40 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ನಡೆಸುತ್ತಿರುವುದು ಬಹಳ ಹೆಮ್ಮೆಯ ವಿಚಾರ. ಯಾವುದೇ ಗರ್ಭಿಣಿ ಮಹಿಳೆಗೆ ತನ್ನ ಚೊಚ್ಚಲ ಸೀಮಂತ ಎಂಬುದು ಬಹುದೊಡ್ಡ ಕನಸಾಗಿರುತ್ತದೆ ಆದರೆ ಕೆಲವು ಕಾರಣಾಂತರ ಅಥವಾ ಕೆಲವರ ಮನೆಯ ಪರಿಸ್ಥಿತಿ ಇವರ ಕನಸನ್ನು ನನಸು ಮಾಡಲು ಸಾಧ್ಯವಾಗುವುದಿಲ್ಲ. ಇಂಥ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನಡೆಸಬೇಕೆಂದು ಆಲೋಚಿಸಿ ಈ ಕಾರ್ಯಕ್ರಮದ ಜವಾಬ್ದಾರಿಯನ್ನು ಸ್ವೀಕರಿಸಿ ತನ್ನ ಆಸ್ಪತ್ರೆಯ ಎಲ್ಲಾ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು. ಆಡಳಿತ ಅಧಿಕಾರಿ ಡಾ. ಕೃತಿ ರವರಿಗೆ ಹಾಗೂ ಅವರ ಕುಟುಂಬಕ್ಕೆ ದೇವರು ಆಶೀರ್ವದಿಸಲಿ ಹಾಗೂ ಇವರ ಸಮಾಜ ಸೇವೆ ಉತ್ತಮ ರೀತಿಯಲ್ಲಿ ಮುಂದುವರೆಯಲೆಂದು ಪ್ರಾರ್ಥಿಸೋಣ ಮತ್ತು ಇಂಥ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ ಎಂದು ತಿಳಿಸಿದರು.ಬೆಂಗಳೂರಿನ ಎಸ್. ವಿ. ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀಣಾ ಮಾತನಾಡಿ, ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನಿಸಿದ್ದಕ್ಕೆ ಹಾಗೂ ಇಂತಹ ಒಂದು ಅದ್ಭುತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ತುಂಬಾ ಖುಷಿ ಕೊಟ್ಟಿದೆ. ಕಾರಣ ಇಷ್ಟೊಂದು ಗರ್ಭಿಣಿಯರಿಗೆ ಸೀಮಂತ ಎಂಬುದು ಅತಿ ಹೆಚ್ಚು ಖುಷಿ ಕೊಡುತ್ತದೆ. ಇಂಥ ಒಂದು ಕಾರ್ಯಕ್ರಮವನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಯೋಜಿಸಿರುವುದು ದೊಡ್ಡ ವಿಚಾರ ಎಂದು ತಿಳಿಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಮಾನಸ, ಸರ್ಕಾರಿ ಆಸ್ಪತ್ರೆ ಎಂದರೆ ಕೆಲವರಿಗೆ ಅಸಭ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಚಿಕಿತ್ಸೆಯು ಲಭ್ಯವಿರುತ್ತದೆ, ವಿಶೇಷವಾಗಿ ಮಹಿಳೆಯರಿಗೆ ಗರ್ಭಿಣಿಯ ಸಂದರ್ಭದಲ್ಲಿ ಬೇಕಾಗುವ ಎಲ್ಲಾ ವೈದ್ಯಕೀಯ ಸೇವೆಗಳು ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಯಾವುದೇ ಸಂದರ್ಭದಲ್ಲಿ ನಿಮಗೆ ಆರೋಗ್ಯಕ್ಕೆ ಸಮಸ್ಯೆ ಎಂದನಿಸಿದರೆ ತಕ್ಷಣ ವೈದ್ಯರನ್ನು ಕಾಣಬೇಕು ಎಂದು ತಿಳಿಸಿದರು. ಭಾರತೀಯರ ಸಂಸ್ಥೆ ಕಾರ್ಯದರ್ಶಿ ಜಬಿ ಉಲ್ಲಾಬೇಗ್, ಆಲದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್, ಬಾಗಿವಾಳು ಗ್ರಾಮಪಂಚಾಯಿತಿ ಅಧ್ಯಕ್ಷೆ ಪವಿತ್ರ, ಸಮಾಜ ಸೇವಕರಾದ ಕುಸುಮ, ಗ್ರಾಮಸ್ಥರು, ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಗರ್ಭಿಣಿಯರ ಕುಟುಂಬ ವರ್ಗದವರು ಹಾಜರಿದ್ದರು. ಸುಮಾರು 210ಕ್ಕೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ