ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ

KannadaprabhaNewsNetwork |  
Published : Oct 02, 2026, 02:15 AM IST
ಮುಂಡಗೋಡ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಗುರುವಾರ ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು. | Kannada Prabha

ಸಾರಾಂಶ

ಹಿರಿಯ ನಾಗರಿಕರಿಗಾಗಿ ರೂಪಿಸಿರುವ ಯೋಜನೆಗಳು ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ, ೨೦೦೭ರಲ್ಲಿರುವ ಪ್ರಮುಖ ಕಾನೂನು ಹಕ್ಕುಗಳು ಮತ್ತು ರಕ್ಷಣಾತ್ಮಕ ಅಂಶಗಳ ಕುರಿತು ವಿವರವಾದ ಮಾಹಿತಿ

ಮುಂಡಗೋಡ: ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು, ಸಮತೋಲಿತ ಆಹಾರ ಸೇವಿಸುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಅತ್ಯವಶ್ಯವಾಗಿದೆ ಎಂದು ಮುಂಡಗೋಡ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಶಿವರಾಜು ಎಚ್.ಎಸ್. ಹೇಳಿದರು.

ಹಿರಿಯ ನಾಗರಿಕರ ದಿನಾಚರಣೆ–೨೦೨೬ರ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ, ಮುಂಡಗೋಡ ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ಗುರುವಾರ ಇಲ್ಲಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ನಾಗರಿಕರಿಗೆ ಸರ್ಕಾರದಿಂದ ಲಭ್ಯವಿರುವ ವಿವಿಧ ಆರೋಗ್ಯ ಸೌಲಭ್ಯಗಳು ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಿದರಲ್ಲದೇ, ಹಿರಿಯ ನಾಗರಿಕರಿಗೆ ಲಭ್ಯವಿರುವ ಕಾನೂನು ಸೇವೆಗಳು, ಹಿರಿಯ ನಾಗರಿಕರಿಗಾಗಿ ರೂಪಿಸಿರುವ ಯೋಜನೆಗಳು ಹಾಗೂ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆ, ೨೦೦೭ರಲ್ಲಿರುವ ಪ್ರಮುಖ ಕಾನೂನು ಹಕ್ಕುಗಳು ಮತ್ತು ರಕ್ಷಣಾತ್ಮಕ ಅಂಶಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಎನ್.ಎ ನಿಂಬಾಯಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಕೀಲರಾದ ಕೆ.ಎನ್. ಹೆಗಡೆ, ಸಿ. ಎಸ್. ಗಾಣಿಗೇರ್, ಬಿ.ಎಫ್. ಪೂಜಾರ್, ಎಂ.ಎ. ನಂದಿಗಟ್ಟಿ, ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಶೈಲ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು. ಆರ್.ಬಿ. ಹುಬ್ಬಳ್ಳಿ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ್ ಬಾರ್ಕಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಆಸ್ತಿ: ವೇದಮೂರ್ತಿ ಬಿ.ಎಸ್.
ಕುಡಿಯುವ ನೀರಿನ ವಿಚಾರದಲ್ಲಿ ಬಿಜೆಪಿಯಿಂದ ರಾಜಕೀಯ: ಅಸೂಟಿ