ಸೆಸ್ಕ್ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ

KannadaprabhaNewsNetwork |  
Published : May 20, 2025, 01:37 AM IST
43 | Kannada Prabha

ಸಾರಾಂಶ

ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು.

ಕನ್ನಡಪ್ರಭ ವಾರ್ತೆ ಮೈಸೂರು

ಸಿಬ್ಬಂದಿ ಸುರಕ್ಷತೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ ಸೆಸ್ಕ್‌, ನಿಗಮದ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಎರಡು ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು, ಶಾಸಕರೂ ಆಗಿರುವ ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಸೋಮವಾರ ಚಾಲನೆ ನೀಡಿದರು.

ವಿಜಯನಗರ 2ನೇ ಹಂತದ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ರಮೇಶ್ ಬಂಡಿಸಿದ್ದೇಗೌಡ ಅವರು, ಜನರಿಗೆ ವಿದ್ಯುತ್ ಪೂರೈಸುವ ಸೆಸ್ಕ್ ಸಿಬ್ಬಂದಿ ತಮ್ಮ ಆರೋಗ್ಯ ಮತ್ತು ಸುರಕ್ಷತೆ ಬಗ್ಗೆಯೂ ಗಮನ ಹರಿಸುವ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ನಿಗಮ ಕೈಗೊಂಡಿರುವ ಈ ಶಿಬಿರವು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು. ಶಿಬಿರದ ಎರಡನೇ ದಿನವಾದ ಮಂಗಳವಾರ (ಮೇ 20) ಪ್ರಧಾನ ಕಚೇರಿಯಲ್ಲಿ ಕರ್ತವ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು.

80 ಪರೀಕ್ಷೆಗಳ ಲಾಭ:

ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 80ಕ್ಕೂ ಹೆಚ್ಚು ತಪಾಸಣೆ ನಡೆಸಲಾಯಿತು. ಪ್ರಮುಖವಾಗಿ ರಕ್ತ ಪರೀಕ್ಷೆ, ಥೈರಾಯ್ಡ್‌ ಪರೀಕ್ಷೆ, ಮೂತ್ರ ಪರೀಕ್ಷೆ, ಎಫ್‌.ಬಿ.ಎಸ್‌, ಎಲ್‌.ಎಫ್‌.ಟಿ, ಕ್ಯಾಲ್ಶಿಯಂ, ವಿಟಮಿನ್‌ ಬಿ12 ಮತ್ತು ಡಿ ಪರೀಕ್ಷೆ ಸೇರಿದಂತೆ ಇನ್ನಿತರ ತಪಾಸಣೆ ನಡೆಸಲಾಯಿತು. ಅಂದಾಜು 7000 ರೂ. ವೆಚ್ಚವಾಗುವ ಈ ಎಲ್ಲಾ ತಪಾಸಣೆಯನ್ನು ಸಂಪೂರ್ಣ ಉಚಿತವಾಗಿ ಕಲ್ಪಿಸುವ ಮೂಲಕ ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಸುರಕ್ಷತೆಗೆ ಸೆಸ್ಕ್‌ ಆದ್ಯತೆ ನೀಡಿದೆ.

ಈ ಸಂದರ್ಭದಲ್ಲಿ ನಿಗಮ ಕಚೇರಿಯಲ್ಲಿ ಹೊಸದಾಗಿ ನಿರ್ಮಿಸಿರುವ ಲಿಫ್ಟ್ ಅನ್ನು ರಮೇಶ್ ಬಂಡಿಸಿದ್ದೇಗೌಡ ಉದ್ಘಾಟಿಸಿದರು. ಈ ವೇಳೆ ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಆರ್. ರೂಪಾ, ಲೋಕೇಶ್ ಮೊದಲಾದವರು ಇದ್ದರು.ತನ್ನ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಮೊದಲಿನಿಂದಲೂ ಸೆಸ್ಕ್ ಆದ್ಯತೆ ನೀಡಿದೆ. ಅದರಂತೆ ನಿಗಮ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ, ಅಧಿಕಾರಿಗಳ ಅನುಕೂಲಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಅಂದಾಜು 7000 ರೂ. ವೆಚ್ಚವಾಗುವ ಹಲವು ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುತ್ತಿದೆ. ಎಲ್ಲಾ ಸಿಬ್ಬಂದಿ ಇದರ ಪ್ರಯೋಜನ ಪಡೆದು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.

- ಕೆ.ಎಂ. ಮುನಿಗೋಪಾಲ್‌ ರಾಜು, ಸೆಸ್ಕ್‌ಎಂಡಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ