ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಟಿ.ಕೆ.ಅನಿಲ್ ಕುಮಾರ್ ಭೇಟಿ ನೀಡಿದ ಸಂದರ್ಭ ಪುತ್ತೂರಿನ ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ, ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆಶಾ ಪುತ್ತೂರಾಯ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಮತ್ತಿತರ ವೈದ್ಯರೊಂದಿಗೆ ಸರ್ಕಾರಿ ಆಸ್ಪತ್ರೆಯ ವ್ಯವಸ್ಥೆ ಕುರಿತು ಚರ್ಚೆ ನಡೆಸಿದರು. ಸೋಮವಾರದ ಕಾರಣ ಅತ್ಯಂತ ಹೆಚ್ಚು ರೋಗಿಗಳು ತುಂಬಿದ್ದ ಆಸ್ಪತ್ರೆಯಲ್ಲಿ ಸ್ಕ್ಯಾನ್ ಆಂಡ್ ಶೇರ್ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಈ ವ್ಯವಸ್ಥೆ ಮಾಡುವುದರಿಂದ ರೋಗಿಯೇ ತಾನ ಸ್ಕ್ಯಾನ್ ಮಾಡುವ ಮೂಲಕ ಟೋಕನ್ ವ್ಯವಸ್ಥೆ ಮಾಡಿಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ಬಂದು ಕಾಯುವ ಅನಿವಾರ್ಯತೆ ಉಂಟಾಗುವುದಿಲ್ಲ. ಹೆಚ್ಚಿನ ರೋಗಿಗಳು ಆಸ್ಪತ್ರೆಗೆ ಬರುವ ಕಾರಣ ತಕ್ಷಣ ಈ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಪುತ್ತೂರು ಸರ್ಕಾರಿ ಆಸ್ಪತ್ರೆಯ ಒಪಿಡಿ, ವೈದ್ಯಕೀಯ ಕೊಠಡಿ, ಡಯಾಲಿಸಿಸ್ ಕೇಂದ್ರ ಸೇರಿದಂತೆ ಎಲ್ಲಾ ವಿಭಾಗಗಳಿಗೂ ಅವರು ಭೇಟಿ ನೀಡಿದರು. ಸರ್ಕಾರಿ ವ್ಯವಸ್ಥೆಯನ್ನು ಸುವ್ಯವಸ್ಥೆಯಲ್ಲಿಟ್ಟುಕೊಂಡಿರುವುದು ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚು ರೋಗಿಗಳು ಬರುತ್ತಿರುವುದನ್ನು ಸ್ವತಹಾ ಅವರು ವೀಕ್ಷಿಸಿದರು.ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಇದ್ದರು.