ವಿವಿಧ ಸಮಸ್ಯೆಗಳ ಬಗ್ಗೆ ಮನವಿಗೆ ಆರೋಗ್ಯ ಇಲಾಖೆ ಸ್ಪಂದನೆ

KannadaprabhaNewsNetwork |  
Published : Aug 30, 2026, 02:15 AM IST
 ಕರವೇ | Kannada Prabha

ಸಾರಾಂಶ

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಸಲ್ಲಿಸಿದ್ದ ಮನವಿಗೆ ಆರೋಗ್ಯ ಇಲಾಖೆ ಸ್ಪಂದಿಸಿದೆ.

ಸೋಮವಾರಪೇಟೆ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಸಲ್ಲಿಸಿದ್ದ ಮನವಿಗೆ ಆರೋಗ್ಯ ಇಲಾಖೆ ಸ್ಪಂದಿಸಿದೆ.

ಮೈಸೂರು ವಿಭಾಗೀಯ ಆರೋಗ್ಯ ಸೇವಾ ಪ್ರಾಧಿಕಾರದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ. ಬುಧವಾರ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ, ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಆಸ್ಪತ್ರೆಯಲ್ಲಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಶೀಘ್ರ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

ಆಸ್ಪತ್ರೆಗೆ ಅರಿವಳಿಕೆ ತಜ್ಞರು, ಮೂಳೆ ಮತ್ತು ಕೀಲು ತಜ್ಞರು ಹಾಗೂ ಮಕ್ಕಳ ವೈದ್ಯರನ್ನು ಕಾಯಂ ಆಗಿ ನೇಮಕ ಮಾಡಬೇಕು. ಆಸ್ಪತ್ರೆಯ ನೈರ್ಮಲ್ಯೀಕರಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಯಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸಬೇಕು. ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ವೈದ್ಯರ ಕೊರತೆ ಸೇರಿದಂತೆ ಆಸ್ಪತ್ರೆಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ಜಿಲ್ಲಾಧ್ಯಕ್ಷ ವಸಂತ್ ಆಚಾರ್ಯ ಒತ್ತಾಯಿಸಿದರು.ಮನವಿಗೆ ಸ್ಪಂದಿಸಿದ ಉಪ ನಿರ್ದೇಶಕಿ ಡಾ. ಬಿ. ಮಲ್ಲಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು. ಆಸ್ಪತ್ರೆಗೆ ನೂತನ ಆಂಬುಲೆನ್ಸ್ ಒದಗಿಸುವ ಕುರಿತು ಚರ್ಚೆ ನಡೆದಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಬೆಳ್ಳಿಹಬ್ಬ ಊರಿಗೆ ಹಬ್ಬವಾಗಲಿ: ಸೀತಾರಾಮ ರೈ
ನಾರಾಯಣ ಗುರು ಜಯಂತಿ: ವಿದ್ಯಾರ್ಥಿ ವೇತನ ವಿತರಣೆ