ಆರೋಗ್ಯ ಆವಿಷ್ಕಾರ ಯೋಜನೆಗೆ ಚಾಲನೆ: ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

KannadaprabhaNewsNetwork |  
Published : Jun 14, 2025, 12:33 AM IST

ಸಾರಾಂಶ

Health Innovation Project launched: CM Siddaramaiah to visit district today

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲಾಡಳಿತ, ಜಿ.ಪಂ, ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಕರ್ನಾಟಕ ಸರ್ಕಾರದ ವತಿಯಿಂದ 440.63 ಕೋಟಿ ರು.ಗಳ ವೆಚ್ಚದಲ್ಲಿ “ಆರೋಗ್ಯ ಆವಿಷ್ಕಾರ” ಯೋಜನೆಯಡಿ ಕಲ್ಯಾಣ ಕರ್ನಾಟಕ ವಿಭಾಗದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಕಾರ್ಯಕ್ರಮ ಹಾಗೂ ಯಾದಗಿರಿ ಜಿಲ್ಲಾ ಬಂಜಾರ ಭವನದ ಉದ್ಘಾಟನೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮ್ಯಯ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯಸಭೆ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿರುವರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ ಗುಂಡೂರಾವ್, ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು ಡಾ.ಅಜಯ ಧರ್ಮಸಿಂಗ್ ಉಪಸ್ಥಿತಿಯಲ್ಲಿ ನೆರವೇರಿಸುವರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಜಿ. ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ರಾಧಾಕೃಷ್ಣ ದೊಡ್ಡಮನಿ, ಬಳ್ಳಾರಿ ಲೋಕಸಭಾ ಸದಸ್ಯರು ಈ.ತುಕಾರಮ್, ದಾವಣಗೆರೆ ಲೋಕಸಭಾ ಸದಸ್ಯರು ಡಾ.ಪ್ರಭಾ ಮಲ್ಲಿಕಾರ್ಜುನ, ಕೊಪ್ಪಳ ಲೋಕಸಭಾ ಸದಸ್ಯರು ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ಬೀದರ ಲೋಕಸಭಾ ಸದಸ್ಯರು ಸಾಗರ ಈಶ್ವರ ಖಂಡ್ರೆ, ರಾಜ್ಯ ಸಭೆ ಸದಸ್ಯರು ಡಾ.ಸೈಯದ್ ನಾಸೀರ್ ಹುಸೇನ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.

------ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್‌ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಅರಣ್ಯ ಜೀವಿಶಾಸ್ತç ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್. ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ

ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ, ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತ ಅಧ್ಯಕ್ಷರಾದ ಜಿ. ಟಿ ಪಾಟೀಲ್, ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್, ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಅಧ್ಯಕ್ಷರಾದ ಕನೀಜ್ ಫಾತೀಮ್, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಬಸನಗೌಡ ದದ್ದಲ್, ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಜೆ.ಎನ್ ಗಣೇಶ್, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಶ್ರೀ ಬಸನಗೌಡ ತುರುವಿಹಾಳ, ಬೆಂಗಳೂರು ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಬಾಬುರಾವ್ ಚಿಂಚನಸೂರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''