ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025ನೇ ಕ್ಯಾಲೆಂಡರ್ ವರ್ಷದಲ್ಲಿ 1ನೇ ತ್ರೈಮಾಸಿಕ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿದಿನ ಮುಂಜಾನೆ ಪೌರಕಾರ್ಮಿಕರು ನಗರಗಳನ್ನು ಸ್ವಚ್ಛ ಮಾಡುತ್ತಾರೆ. ಅವರಿಗೆ ಸಮವಸ್ತ್ರ, ಸುರಕ್ಷಿತವಾದ ಮಾಸ್ಕ್, ಪಾದರಕ್ಷೆಗಳನ್ನು ವಿತರಿಸಬೇಕು. ಅವರು ವಿಶ್ರಾಂತಿ ಪಡೆಯಲು ವಿಶ್ರಾಂತಿ ಕೊಠಡಿಗಳನ್ನು ಮಾಡಿರಬೇಕು ಹಾಗೂ ಅವರಿಗೆ ಗುಣಮಟ್ಟದ ಉಪಾಹಾರದ ವ್ಯವಸ್ಥೆಯನ್ನು ಮಾಡಬೇಕು. ಈ ಕುರಿತು ಮೂರು ದಿನಗಳೊಳಗೆ ದಾಖಲಾತಿಗಳ ಸಮೇತ ವರದಿ ನೀಡುವಂತೆ ತಿಳಿಸಿದರು.
ಪೌರಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ಪ್ರತಿ 3 ತಿಂಗಳಿಗೊಮ್ಮೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಪ್ರತೀ ತಿಂಗಳು ಪೌರಕಾರ್ಮಿಕರಿಗೆ ವೇತನ ವಿಳಂಬವಾಗಬಾರದು ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಕ್ರಮ ವಹಿಸಬೇಕು ಎಂದರು.ಕೆಲ ತಾಲೂಕುಗಳಲ್ಲಿ ಪೌರಕಾರ್ಮಿಕರ ನೇಮಕಾತಿ ವಿಳಂಬವಾಗಿರುವುದು ಕಂಡುಬಂದಿದೆ. ಆದ್ದರಿಂದ ನೇಮಕಾತಿ ಕುರಿತು ಸಮಿತಿ ರಚನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಪೌರಕಾರ್ಮಿಕರು ಮರಣಹೊಂದಿದರೆ ಅವರ ಅವಲಂಭಿತರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ತಹಸೀಲ್ದಾರರು, ಪೌರಾಯುಕ್ತರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.