- ಬೃಹತ್ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮದಲ್ಲಿ ಅಧ್ಯಕ್ಷ ಪ್ರಕಾಶ್ ಹೆಬ್ಬಾರ್
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪತಂಜಲಿ ಯೋಗ ಸಮಿತಿಯ ಧ್ಯೇಯ ಮನೆ ಮನೆಯಲ್ಲಿ ಆರೋಗ್ಯದ ಕುರಿತು ಕಾಳಜಿ ವಹಿಸುವುದಾಗಿದೆ ಎಂದು ತಾಲೂಕು ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಪ್ರಕಾಶ್ ಹೆಬ್ಬಾರ್ ಹೇಳಿದರು.ಮಂಗಳವಾರ ಪಟ್ಟಣದ ಭಾರತೀಯ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಮ್ಮ ಸಂಸ್ಥೆ ಆರೋಗ್ಯವೇ ಭಾಗ್ಯ ಎಂಬ ಧ್ಯೇಯವನ್ನು ಹೊಂದಿದೆ. ಅದಕ್ಕಾಗಿ ಯೋಗ ತರಬೇತಿ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.
ಸಂಸ್ಥೆಯ ಖಜಾಂಚಿ ಶ್ರೀಕಾಂತ್ ಕುರ್ಡೇಕರ್ ಅವರು ಪತಂಜಲಿ ಯೋಗ ಸಮಿತಿ ನಡೆದುಕೊಂಡು ಬಂದ ಹಾದಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ 45ಕ್ಕೂ ಹೆಚ್ಚು ತಜ್ಞ ವೈದ್ಯರ ತಂಡ ಹಾಗೂ ವೈದ್ಯಕೀಯ ಸಿಬ್ಬಂದಿ ಮಧುಮೇಹ, ಹೃದಯ, ಮೂಳೆ, ಕಿವಿ, ಮೂಗು, ಗಂಟಲು, ಕಣ್ಣು, ಚರ್ಮ ರೋಗ, ದಂತ ರೋಗ, ಮಕ್ಕಳ ಆರೋಗ್ಯದ ಬಗ್ಗೆ ಶಿಬಿರಕ್ಕೆ ಬಂದ ಜನರಿಗೆ ತಪಾಸಣೆ ಮಾಡಿದರು.
- - -
ಹೊನ್ನಾಳಿ ಪಟ್ಟಣದ ಬಿವಿಎಸ್ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ವೈದ್ಯ ರಾಜಕುಮಾರ್ ಉದ್ಘಾಟಿಸಿದರು.