ಆರೋಗ್ಯವೇ ಮನುಷ್ಯನ ಅತ್ಯಮೂಲ್ಯ ಆಸ್ತಿ: ಶಂಕರರಾಜೇಂದ್ರ ಸ್ವಾಮೀಜಿ

KannadaprabhaNewsNetwork |  
Published : Oct 12, 2026, 03:00 AM IST
. (ಫೋಟೊಬಿಕೆಟಿ2, ಅಮೀನಗಡದ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶಂಕರರಾಜೇಂದ್ರ ಮಹಾಸ್ವಾಮಿಗಳು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.) | Kannada Prabha

ಸಾರಾಂಶ

ಅಮೀನಗಡದ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶಂಕರರಾಜೇಂದ್ರ ಮಹಾಸ್ವಾಮಿಗಳು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಆರೋಗ್ಯವೇ ಮನುಷ್ಯನ ಅತ್ಯಮೂಲ್ಯ ಆಸ್ತಿಯಾಗಿದ್ದು, ಅದನ್ನು ಕಾಪಾಡಿಕೊಳ್ಳಲು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ ಎಂದು ಗಚ್ಚಿನಮಠದ ಶಂಕರರಾಜೇಂದ್ರ ಸ್ವಾಮೀಜಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಹಾಗೂ ಉತ್ತಮ ಆಡಳಿತದ ನಿಮಿತ್ತ ಬಿಜೆಪಿ ಗ್ರಾಮೀಣ ಮಂಡಲ, ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಕುಮಾರೇಶ್ವರ ಆಸ್ಪತ್ರೆ ಸಹಯೋಗದಲ್ಲಿ ಸೇವಾ ಸಂಕಲ್ಪ ಅಭಿಯಾನದಡಿ ಅಮೀನಗಡದ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರಕ್ಕೆ ರಕ್ತದಾನ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯ ತಪಾಸಣೆಯಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಾಧ್ಯವಾಗುತ್ತದೆ. ಆರೋಗ್ಯಕರ ಹಾಗೂ ಸಂತೋಷದ ಜೀವನ ನಡೆಸಲು ಉತ್ತಮ ಆರೋಗ್ಯ ಮುಖ್ಯವಾಗಿದೆ. ಸಂಭಾವ್ಯ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು, ಆರಂಭದಲ್ಲಿಯೇ ಗುರುತಿಸಲು ಮತ್ತು ಸೂಕ್ತ ಚಿಕಿತ್ಸೆ ಪಡೆಯಲು ಇಂತಹ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಆರೋಗ್ಯ ಉಚಿತ ತಪಾಸಣೆ ಹಾಗೂ ರಕ್ತದಾನ ಶಿಬಿರಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆಯಾಗಬೇಕು ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೋಣ್ಣೂರ, ಹಿರಿಯ ಮುಖಂಡರಾದ ಬಿ.ಎಸ್. ನಿಡಗುಂದಿ, ಪುಂಡಲೀಕಪ್ಪ ಮೂಲಿಮನಿ, ವಿಜಯ ಕಣ್ಣೂರ, ಸಂತೋಷ ಐಹೋಳೆ, ಬಸು ಬೇವೂರ, ಬಾಬು ಛೆಬ್ಬಿ, ಗುರುರಾಜ ಚಳ್ಳಿಗಿಡದ, ಸುಜಾತಾ ತತ್ರಾಣಿ, ಶ್ರೀದೇವಿ ನಿಡಗುಂದಿ, ಮಲ್ಲೇಶ ಬಿಜಾಪುರ, ಮುತ್ತು ಸಿಮೀಕೇರಿ ಹಾಗೂ ಭೀಮೂ ಬೀಳಗಿ ಉಪಸ್ಥಿತರಿದ್ದರು.

ಆರೋಗ್ಯ ಉಚಿತ ಸೇವೆಯಲ್ಲಿ ಎಚ್ಎಸ್‌ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ.ನವೀನ ಚರಂತಿಮಠ, ಡಾ.ಎಸ್.ಎಸ್. ಮಾಲಿಪಾಟೀಲ, ಡಾ.ವಿ.ವಿ. ಸಂಪಗಾವಿ ಸೇರಿದಂತೆ ಹಲವು ವೈದ್ಯರು ಹಾಗೂ ಸಿಬ್ಬಂದಿ ಸೇವೆ ಸಲ್ಲಿಸಿದರು. ಶಿಬಿರದಲ್ಲಿ 300ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಸುಮಾರು 15 ಜನರು ರಕ್ತದಾನ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲೆಂದರಲ್ಲಿ ಧೂಮಪಾನ, ನಿಯಂತ್ರಣವೇ ಸವಾಲು!
ಸಮಾಜದ ಒಳಿತಿಗಾಗಿ ಸಮರ್ಪಿಸಿಕೊಳ್ಳುವುದೇ ಶಕ್ತಿ ಆರಾಧನೆ: ರಂಭಾಪುರಿ ಜಗದ್ಗುರು