ಎಲ್ಲ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯ ಬಹಳ ಮುಖ್ಯ-ಗಾಜೀಗೌಡ್ರ

KannadaprabhaNewsNetwork |  
Published : Jan 11, 2026, 03:00 AM IST
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಹುಡಾ ಅಧ್ಯಕ್ಷ ಎಸ್‌ಎಫ್‌ಎನ್ ಗಾಜೀಗೌಡ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ಎಲ್ಲ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯ ಬಹಳ ಮುಖ್ಯ. ಮನುಷ್ಯ ಎಷ್ಟೇ ಓದಿದ್ದರೂ ಹಾಗೂ ಹಣವಿದ್ದರೂ ಸಹಿತ ಆರೋಗ್ಯ ಉತ್ತಮವಾಗಿಲ್ಲವಾದರೆ ಪ್ರಯೋಜವಿಲ್ಲ. ಹಾಗಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ ಹೇಳಿದರು.

ಹಾವೇರಿ: ಎಲ್ಲ ಭಾಗ್ಯಗಳಿಗಿಂತ ಆರೋಗ್ಯ ಭಾಗ್ಯ ಬಹಳ ಮುಖ್ಯ. ಮನುಷ್ಯ ಎಷ್ಟೇ ಓದಿದ್ದರೂ ಹಾಗೂ ಹಣವಿದ್ದರೂ ಸಹಿತ ಆರೋಗ್ಯ ಉತ್ತಮವಾಗಿಲ್ಲವಾದರೆ ಪ್ರಯೋಜವಿಲ್ಲ. ಹಾಗಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ ಹೇಳಿದರು.ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಜರುಗಿದ 2025-26ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಮಕ್ಕಳಿಗೆ ಕ್ರೀಡಾಕೂಟಗಳನ್ನು ಆಯೋಜಿಸುವುದು ಸಾಮಾನ್ಯ. ಆದರೆ ಇಂದು ಗುರುಗಳಿಗೆ ಕ್ರೀಡಾಕೂಟ ಆಯೋಜಿಸಲಾಗಿದೆ. ಮಕ್ಕಳ ಆರೋಗ್ಯದಂತೆ ಗುರುಗಳ ಆರೋಗ್ಯ ಸಹ ಚನ್ನಾಗಿರಬೇಕು. ಆಟದಲ್ಲಿ ಸೋಲು-ಗೆಲುವು ಸಾಮಾನ್ಯ, ಸೋಲಿನ ನಂತರ ಗೆಲುವು ಬರುತ್ತದೆ. ಹಾಗಾಗಿ ಎಲ್ಲರೂ ಕ್ರೀಡಾಮನೋಭಾವದಿಂದ ಶಿಸ್ತುಬದ್ಧರಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು. ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ.ವಿ. ಜಯಮಹಾಂತೇಶ ದಾನಮ್ಮನವರ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ನಮ್ಮ ದೈನಂದಿನ ಕೆಲಸ ಕಾರ್ಯಗಳ ನಡುವೆ ನಮ್ಮ ಆರೋಗ್ಯ ಕಾಪಾಡಿಕೊಳುವುದು ಅಗತ್ಯವಾಗಿದೆ. ಕ್ರೀಡಾಕೂಟಗಳು ಹೊಸ ಚೈತನ್ಯ ಹಾಗೂ ಉತ್ಸಾಹ ತುಂಬುತ್ತವೆ. ಕ್ರೀಡಾಕೂಟದಲ್ಲಿ ಭಾಗವಹಿಸಲು ನೌಕರರಿಗೆ ಒಒಡಿ ಸೌಲಭ್ಯ ನೀಡಲಾಗಿದೆ. ಎಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಹಾಗೂ ಸೋಲನ್ನು ಒಳ್ಳೆಯ ಮನಸ್ಥಿತಿಯಿಂದ ಸ್ವೀಕಾರ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಕ್ರೀಡಾ ಜ್ಯೋತಿ:ಜಿಪಂ ಸಿಇಒ ರುಚಿ ಬಿಂದಲ್, ಎಸ್ಪಿ ಯಶೋದಾ ವಂಟಗೋಡಿ ಕ್ರೀಡಾಜ್ಯೋತಿ ಸ್ವೀಕರಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್. ಅವರು ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.ಕಂದಾಯ ಇಲಾಖೆ, ಹಾವೇರಿ ತಹಸೀಲ್ದಾರ ಕಚೇರಿ, ಸ್ಕೌಟ್ ಆಂಡ್ ಗೌಡ್ಸ್, ಬ್ಯಾಡಗಿ, ಹಾವೇರಿ, ರಾಣಿಬೆನ್ನೂರು, ಹಾನಗಲ್ ತಾಲೂಕು ಪಂಚಾಯಿತಿ ಸೇರಿದಂತೆ ಒಟ್ಟು ಏಳು ತಂಡಗಳಿAದ ಶಿಸ್ತುಬದ್ಧ ಪಥಸಂಚಲನ ಜರುಗಿತು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ದರ್ಶನ ಲಮಾಣಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಜಿಪಂ ಉಪ ಕಾರ್ಯದರ್ಶಿ ಡಾ.ಪುನಿತ್, ಎಲ್., ಡಿಡಿಪಿಐ ಮೋಹನ ದಂಡಿನ, ಬಿಇಒ ಎಂ.ಎಚ್.ಪಾಟೀಲ, ಪಿಡಬ್ಲ್ಯೂಡಿ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಎನ್. ಪಾಟೀಲ, ರಮೇಶ ಆನವಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ತಾಲೂಕು ಪದಾಧಿಕಾರಿಗಳಾದ ಗುರುನಾಥ ಗಾವಣೇಕರ, ಮೇಘರಾಜ ಮಾಳಗಿಮನಿ, ಬಸವರಾಜ ಹೊಸಮನಿ, ಮಂಜುನಾಥ ಕೆಂಚರಡ್ಡಿ, ಬಿ.ಪಿ. ಶಿಡೇನೂರ, ಶಂಕರಗೌಡ ನಿಸ್ಸಿಮಗೌಡ್ರ, ಮಣಿಯಾರ, ಕೆಂಚರಡ್ಡಿ, ಮಲ್ಲಿಕಾರ್ಜುನ ಶಾಂತಗಿರಿ ಇತರರಿದ್ದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ನಾಗರಾಜ ನಡುವಿನಮಠ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ