ಮಾನಸಿಕ ಸದೃಢತೆಯಿಂದ ಮಾತ್ರ ಆರೋಗ್ಯ ಸಾಧ್ಯ : ನ್ಯಾ. ಹನುಮಂತಪ್ಪ

KannadaprabhaNewsNetwork |  
Published : Oct 12, 2025, 01:00 AM IST
ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರುಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ನಗರದ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಯುವ ರೆಡ್‌ ಕ್ರಾಸ್‌ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ದೇಹಕ್ಕೆ ಕಾಯಿಲೆ ಅಥವಾ ತೊಂದರೆಯಾದಾಗ ಚಿಕಿತ್ಸೆಗೆ ಮುಂದಾಗುತ್ತೇವೆ. ಬಿಪಿ, ಶುಗರ್, ಥೈರಾಯ್ಡ್ ಮುಂತಾದ ಕಾಯಿಲೆಗಳ ಬಗ್ಗೆ ಬೇರೆಯವರೊಂದಿಗೆ ಹಂಚಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಸಮುದಾಯದ ಆರೋಗ್ಯ ಸಹ ಅವಶ್ಯಕ ಎಂದರು.ತುರ್ತು ಪರಿಸ್ಥಿತಿ, ಯುದ್ಧಗಳಲ್ಲಿ ಭಾಗವಹಿಸುವ ವ್ಯಕ್ತಿಗಳಿಗೆ ಬರುವ ನೋವು, ಮಾನಸಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಲು ಘೋಷವಾಕ್ಯ ನೀಡಲಾಗಿದೆ. ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಆರೋಗ್ಯವಂತ ರಾಗಿದ್ದಾರೆಂಬುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಉದ್ದೇಶ ಎಂದು ಹೇಳಿದರು.ಶೇ.8 ಕ್ಕಿಂತ ಹೆಚ್ಚು ಪ್ರಪಂಚದಲ್ಲಿ ವಿವಿಧ ರೀತಿ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಮೊಬೈಲ್ ಗೀಳು ಹೆಚ್ಚಿಸಿಕೊಂಡವರು ಕೂಡ ಮಾನಸಿಕ ಕಾಯಿಲೆಗೆ ಒಳಗಾಗಿದ್ದಾರೆ ಎಂದು ಅರ್ಥೈಸಲಾಗುತ್ತಿದೆ ಎಂದು ತಿಳಿಸಿದರು.ಸರ್ಕಾರ ನಿಗಧಿ ಪಡಿಸಿರುವ ಅವಧಿಗಿಂತ ಮೊದಲು ಮದುವೆಯಾಗಿದ್ದರೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗುತ್ತದೆ. ಎಫ್‌ಎಸ್‌ಎಲ್ ವರದಿಯಲ್ಲಿ ಗರ್ಭಿಣಿಯಾಗಿರುವುದು ದೃಢಪಟ್ಟರೆ ಕನಿಷ್ಠ 20 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲರಾದ ತಸ್ನಿಮ್ ಕೌಸರ್ ಮನಿಯಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ, ಮಾನಸಿಕ ತಜ್ಞ ಡಾ. ವಿನಯ್‌ಕುಮಾರ್, ಆರ್.ಸಿಎಚ್ ಅಧಿಕಾರಿ ಡಾ. ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಅನಿಕೇತ್, ಹರ್ಷ, ವೈ.ಎಂ. ಲಲಿತ, ಗಣೇಶ್, ಜಯಣ್ಣ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಬೇಬಿ ಸ್ವಾಗತಿಸಿದರು. 11 ಕೆಸಿಕೆಎಂ 1ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ನ್ಯಾ. ಹನುಮಂತಪ್ಪ ಉದ್ಘಾಟಿಸಿದರು.

PREV

Recommended Stories

ಪ್ರೇಮಿ ಜೊತೆ ಓಡಿ ಹೋದ ಮಗಳ ತಿಥಿ ಮಾಡಿದ ಅಪ್ಪ
ಇಂದು ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ - ಮುಂದಿನ 3-4 ದಿನ ಹಲವೆಡೆ ಉತ್ತಮ ಮಳೆ