ಆರೋಗ್ಯವೇ ಜೀವನದ ಸಂಪತ್ತು: ಅಂಚಟಗೇರಿ

KannadaprabhaNewsNetwork |  
Published : Aug 20, 2026, 02:00 AM IST
ಡಾ. ಬಿ.ಡಿ. ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದ ವತಿಯಿಂದ ಮನಗುಂಡಿ ಗ್ರಾಮದಲ್ಲಿ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

“ಆರೋಗ್ಯವೇ ಜೀವನದ ನಿಜವಾದ ಸಂಪತ್ತು. ಗ್ರಾಮೀಣ ಪ್ರದೇಶದ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಲು ನಿಯಮಿತ ಆರೋಗ್ಯ ತಪಾಸಣೆ ಅಗತ್ಯ.

ಧಾರವಾಡ:

ಡಾ. ಬಿ.ಡಿ. ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಯ ಅಂಗವಾಗಿ ಮನಗುಂಡಿ ಗ್ರಾಮದಲ್ಲಿ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಲ್ಲಿನ ಸಕ್ಕರೆ ಪರೀಕ್ಷಾ ಶಿಬಿರಕ್ಕೆ ಮಾಜಿ ಮೇಯರ್‌ ಈರೇಶ ಅಂಚಟಗೇರಿ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಅವರು, “ಆರೋಗ್ಯವೇ ಜೀವನದ ನಿಜವಾದ ಸಂಪತ್ತು. ಗ್ರಾಮೀಣ ಪ್ರದೇಶದ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಲು ನಿಯಮಿತ ಆರೋಗ್ಯ ತಪಾಸಣೆ ಅಗತ್ಯ ಎಂದು ಹೇಳಿದರು.

ವೈದ್ಯಕೀಯ ಸೇವೆಗಳು ಗ್ರಾಮೀಣ ಜನರ ಮನೆ ಬಾಗಿಲಿಗೆ ತಲುಪುವಂತೆ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಶ್ಲಾಘನೀಯ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಎನ್ನೆಸ್ಸೆಸ್‌ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಮನಗುಂಡಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಡೆದ ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಲ್ಲಿನ ಸಕ್ಕರೆ ಪರೀಕ್ಷೆ ಸೇರಿದಂತೆ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು.

ಗ್ರಾಮದ ಹಿರಿಯರಾದ ಶಿವಪ್ಪ ಹುಂಬೇರಿ, ಬಸಪ್ಪ ಗಂಗನ್ನವರ, ಡಾ. ಆನಂದ ಹೊಸೂರ, ಫಕ್ಕಿರಪ್ಪ ಬುದ್ನಿಕಾಯಿ, ಡಾ. ಅಭಿನಂದನ ಪಾಟೀಲ, ಶಿವಾನಂದ ಸಾಲಗಟ್ಟಿ ಇದ್ದರು. ಶಿಬಿರವು ಆ. 19ರಿಂದ 21ರ ವರೆಗೆ ಹಾಗೂ ಆ. 24ರಿಂದ 25ರ ವರೆಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಆಯೋಜಕರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
ಬಾಗೇವಾಡಿ ಕಾಲುವೆಗಳಿಗೆ ಸಮರ್ಪಕ ನೀರು ಹರಿಸಲು ಆಗ್ರಹಿಸಿ ಮನವಿ