ಕೇಂದ್ರ ಸರ್ಕಾರದ 15ನೇ ಹಣಕಾಸಿನ ಯೋಜನೆ ಮೂಲಕ ಆರೋಗ್ಯ ಇಲಾಖೆಯ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ತಾಲೂಕಿನಲ್ಲಿ 40 ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಗ್ರಾಮದಲ್ಲಿ ಸುಮಾರು 65 ಲಕ್ಷದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣವಾಗಲಿದೆ ಸುಸಜ್ಜಿತ ಹೊಸ ಕಟ್ಟಡದಲ್ಲಿ ಗ್ರಾಮಸ್ಥರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಲಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಪಡೆಯಲು ಯೋಜನೆಗಳನ್ನು ರೂಪಿಸುವಂತೆ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ ಸಾವಯವ ಆಹಾರ ಪದಾರ್ಥಗಳನ್ನು ಹೆಚ್ಚು ಬಳಸುವುದರಿಂದ ಬಿಪಿ, ಶುಗರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಲಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ತಿಳಿಸಿದರು.
ಹೋಬಳಿಯ ಜಂಬೂರು ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಭಾರತ ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹಿ ರೋಗಿಗಳನ್ನು ಹೊಂದಿರುವುದರ ಜೊತೆಗೆ ಪ್ರತಿ ವರ್ಷ ಈ ಕಾಯಿಲೆಯಿಂದ ಉಂಟಾಗುವ ಅಂಗಗಳ ಸಮಸ್ಯೆಯಿಂದ ಸಾವಿರಾರು ಜನರು ಸಾವನಪುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಭವಿಷ್ಯದಲ್ಲಿ ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಸರಿಯಾದ ಆಹಾರ ಪದ್ಧತಿ ಇಲ್ಲದೆ ಮಧುಮೇಹಿ ರೋಗಿಗಳ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಸಾವಯವ ಪದಾರ್ಥಗಳನ್ನು ಹೆಚ್ಚು ಬಳಸುವುದರಿಂದ ರೋಗವನ್ನು ತಡೆಗಟ್ಟಬಹುದಾಗಿದೆ ಎಂದು ಸಲಹೆ ನೀಡಿದರು.ಕೇಂದ್ರ ಸರ್ಕಾರದ 15ನೇ ಹಣಕಾಸಿನ ಯೋಜನೆ ಮೂಲಕ ಆರೋಗ್ಯ ಇಲಾಖೆಯ ಆಯುಷ್ಮಾನ್ ಸ್ವಾಸ್ಥ್ಯ ಯೋಜನೆ ವತಿಯಿಂದ ತಾಲೂಕಿನಲ್ಲಿ 40 ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಗ್ರಾಮದಲ್ಲಿ ಸುಮಾರು 65 ಲಕ್ಷದಲ್ಲಿ ನೂತನ ಆರೋಗ್ಯ ಕಟ್ಟಡ ನಿರ್ಮಾಣವಾಗಲಿದೆ ಸುಸಜ್ಜಿತ ಹೊಸ ಕಟ್ಟಡದಲ್ಲಿ ಗ್ರಾಮಸ್ಥರಿಗೆ ಉತ್ತಮ ಆರೋಗ್ಯ ಸೇವೆ ಲಭಿಸಲಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆರೋಗ್ಯ ಸೇವೆ ಪಡೆಯಲು ಯೋಜನೆಗಳನ್ನು ರೂಪಿಸುವಂತೆ ಮನವಿ ಮಾಡಿದರು.ಗ್ರಾಮದಲ್ಲಿ ಈಗಾಗಲೇ ಸುಮಾರು 45 ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಮುಖ್ಯ ರಸ್ತೆ ಸೇರಿದಂತೆ ಹಲವು ರಸ್ತೆಗಳ ಅಭಿವೃದ್ಧಿಗೆ ದೇವಾಲಯಗಳ ನಿರ್ಮಾಣಕ್ಕೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ನೀಡಲಾಗಿದೆ. ಪ್ರತಿವರ್ಷವೂ ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಗ್ರಾಮದ ಕೆರೆಯನ್ನು ತುಂಬಿಸಲಾಗುತ್ತಿದೆ, ಇದರಿಂದ ಈ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಂಗಸ್ವಾಮಿ, ಹೇಮಾವತಿ ಸಕ್ಕರೆ ಕಾರ್ಖಾನೆ ಮಾಜಿ ನಿರ್ದೇಶಕ ಜೆಡಿ ಶಂಕರ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಮುಖಂಡರಾದ ಅಣ್ಣಯ್ಯ, ಕಂಡಕ್ಟರ್ ಸಣ್ಣೇಗೌಡ, ಜೆಡಿಎಸ್ ಯುವ ಮುಖಂಡ ಜಂಬೂರು ಮಹೇಶ್, ಕುಮಾರ್, ಪ್ರಶಾಂತ್, ರಮೇಶ್( ದಾದಾ ) ಅಪ್ಪಾಜಿ, ರಾಜೇಶ್, ಸ್ವಾಮಿ, ಧರಣಿ ಕುಮಾರ್, ನಾರಾಯಣಸ್ವಾಮಿ, ನಂಜುಂಡಿ, ಗುತ್ತಿಗೆದಾರ ಪುನೀತ್, ಅರ್ಚಕ ಸೋಮು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.