ಮಂಗಳೂರು: ಅಪಸ್ಮಾರ (ಮೂರ್ಛೆ) ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೊರತೆ ಇದ್ದು, ಮೂಢನಂಬಿಕೆಗೆ ಬಲಿಯಾಗುತ್ತಿರವ ಜನರಿಗೆ ಸಮರ್ಪಕ ಅರಿವು ಮೂಡಿಸುವ ಮೂಲಕ ಅಪಸ್ಮಾರದ ಕುರಿತ ತಪ್ಪು ಕಲ್ಪನೆ ಹೋಗಲಾಡಿಸಲು ಪ್ರತಿಯೊಬ್ಬರೂ ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಹೇಳಿದ್ದಾರೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿಯಲ್ಲಿ ಬುಧವಾರ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ದ.ಕ. ವತಿಯಿಂದ ನಡೆದ ಅಂತಾರಾಷ್ಟ್ರೀಯ ಅಪಸ್ಮಾರ ದಿನಾಚರಣೆಯ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮೂರ್ಛೆ ರೋಗದ ಕುರಿತು ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಸೂಕ್ತ ಚಿಕಿತ್ಸೆಯನ್ನು ಪ್ರೋತ್ಸಾಹಿಸಬೇಕಿದೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು, ಮಂಗಳೂರು ತಾಲೂಕು ಅರೋಗ್ಯ ಅಧಿಕಾರಿ ಡಾ. ಸುಜಯ್ ಕುಮಾರ್, ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ, ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕಿ ಸೌಮ್ಯಾ ಆರ್.ಕೆ., ಇಲಾಖೆಗೆ ಸಂಬಂಧಿಸಿದ ವಿವಿಧ ವಿಭಾಗದ ಅಧಿಕಾರಿಗಳು ಮತ್ತು ಬ್ರೈನ್ ಹೆಲ್ತ್ ಕ್ಲಿನಿಕ್‌ನ ಫಿಸಿಯೋಥೆರಪಿಸ್ಟ್ ಮತ್ತು ಮನಃಶಾಸ್ತ್ರಜ್ಞರು ಇದ್ದರು.