ಕ್ಯಾನ್ಸರ್ ತಡೆಗಟ್ಟಲು ಆರೋಗ್ಯಕರ ಜೀವನಶೈಲಿ ಮುಖ್ಯ: ಡಾ.ಜಿ.ಎಸ್. ಸಿದ್ದಲಿಂಗಪ್ಪ

KannadaprabhaNewsNetwork |  
Published : Feb 07, 2026, 01:15 AM IST
 ಸಿಕೆಬಿ-2  ನಗರದ ವಾಪಸಂದ್ರದ   ಬಾಲಕಿಯರ  ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ  ಭಾರತೀಯ ವೈದ್ಯಕೀಯ ಸಂಘ  ಚಿಕ್ಕಬಳ್ಳಾಪುರ ಜಿಲ್ಲಾ ಶಾಖೆ “ವಿಶ್ವ ಕ್ಯಾನ್ಸರ್ ದಿನದ ಬಗ್ಗೆ  ವಿದ್ಯಾರ್ಥಿಗಳಿಗೆ  ಜಾಗೃತಿ ಮತ್ತು ತಡೆಗಟ್ಟುವಿಕೆ ಬಗ್ಗೆ  ಅರಿವು ಮೂಡಿಸಲಾಯಿತು    | Kannada Prabha

ಸಾರಾಂಶ

ಪ್ರತಿದಿನ 30 ನಿಮಿಷ ವ್ಯಾಯಾಮ, ಹಣ್ಣು-ತರಕಾರಿ ಸೇವನೆ, ಬಿಸಿಲಿನಿಂದ ರಕ್ಷಣೆ ಹಾಗೂ ಲಸಿಕೆ ಪಡೆಯುವ ಮೂಲಕ ಕ್ಯಾನ್ಸರ್ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕ್ಯಾನ್ಸರ್ ತಡೆಗಟ್ಟಲು ಆರೋಗ್ಯಕರ ಜೀವನಶೈಲಿ, ತಂಬಾಕು, ಮದ್ಯಪಾನ ತ್ಯಜಿಸುವುದು, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರಂಭಿಕ ತಪಾಸಣೆ ಅತಿ ಮುಖ್ಯವಾಗಿದ್ದು, ಈ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅತಿ ಅಗತ್ಯವಾಗಿದೆ ಎಂದು ಜಿ.ಎಸ್. ಆಸ್ಪತ್ರೆ ಸಂಸ್ಥಾಪಕ ನಿರ್ದೇಶಕ ಡಾ.ಜಿ.ಎಸ್. ಸಿದ್ದಲಿಂಗಪ್ಪ ಹೇಳಿದರು.

ನಗರದ ವಾಪಸಂದ್ರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಶಾಖೆ ಹಾಗೂ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ವಾಪಸಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ದಿನ ಜಾಗೃತಿ ಮತ್ತು ತಡೆಗಟ್ಟುವಿಕೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧೂಮಪಾನದಿಂದ ಶ್ವಾಸಕೋಶ, ಬಾಯಿ ಕ್ಯಾನ್ಸರ್ ಸಾಧ್ಯತೆ ಹೆಚ್ಚು. ಪ್ರತಿದಿನ 30 ನಿಮಿಷ ವ್ಯಾಯಾಮ, ಹಣ್ಣು-ತರಕಾರಿ ಸೇವನೆ, ಬಿಸಿಲಿನಿಂದ ರಕ್ಷಣೆ ಹಾಗೂ ಲಸಿಕೆ ಪಡೆಯುವ ಮೂಲಕ ಕ್ಯಾನ್ಸರ್ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದಾಗಿದೆ. ಇದರಲ್ಲಿ ಬಹು ಮುಖ್ಯವಾಗಿ ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಮುಖ್ಯವಾಗಿದ್ದು, ತಂಬಾಕು ಮತ್ತು ಮದ್ಯಪಾನ ಕಡ್ಡಾಯವಾಗಿ ತ್ಯಜಿಸಬೇಕಿದೆ. ಧೂಮಪಾನವು ಕ್ಯಾನ್ಸರ್ ಉಂಟುಮಾಡುವ ಪ್ರಮುಖ ಕಾರಣವಾಗಿದೆ. ತಂಬಾಕು ಸೇವನೆ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಇದರ ನಿವಾರಣೆಗೆ ಹೆಚ್ಚು ಜಾಗೃತಿ ಅಗತ್ಯವಾಗಿದೆ ಎಂದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಶಾಖೆ ಕಾರ್ಯದರ್ಶಿ ಡಾ. ಮೋಹನ್ ಬಾಬು ಮಾತನಾಡಿ, ಆರೋಗ್ಯಕರ ಆಹಾರ ಪದ್ಧತಿ ಅದರಲ್ಲಿ ಬ್ರೊಕ್ಲಿ, ಹೂಕೋಸು, ಹಣ್ಣುಗಳು, ತರಕಾರಿಗಳು ಮತ್ತು ನಾರಿನಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸುವ ಅಗತ್ಯೆ ಇದ್ದು ಸಂಸ್ಕರಿಸಿದ ಆಹಾರಗಳನ್ನು ಕಡಿಮೆ ಮಾಡಿ. ನಿಯಮಿತ ದೈಹಿಕ ಚಟುವಟಿಕೆ ಅಳವಡಿಸಿಕೊಳ್ಳಬೇಕು ಎಂದರು. ವಾಪಸಂದ್ರ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸೂರ್ಯಪ್ರಕಾಶ್ ಮಾತನಾಡಿ, ಪರಿಸರ ಸಂರಕ್ಷಣೆಯು ಭೂಮಿಯ ಮೇಲಿನ ಸಮಸ್ತ ಜೀವಿಗಳ ಉಳಿವಿಗಾಗಿ ಪ್ರತಿಯೊಬ್ಬರ ಪ್ರಮುಖ ಜವಾಬ್ದಾರಿಯಾಗಿದೆ ಎಂದರುಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಡಾ. ಶಾಮಸುಂದರ್, ಡಾ. ವೆಂಕಟಚಲಪತಿ, ಡಾ. ಶ್ರವಣ್, ಡಾ. ಸೌಮ್ಯ, ಡಾ.ಅನಿತಾ, ಡಾ.ಸುಷ್ಮಾ, ಶಾಲೆಯ ದೈಹಿಕ ಶಿಕ್ಷಕ ಕೆ.ಪಿ.ಅಜ್ಜಪ್ಪ, ಸಹ ಶಿಕ್ಷಕರಾದ ರಾಜಣ್ಣ, ಗಿರಿಬಾಬು, ರಬ್ಬಾನಿ, ವೆಂಕಟೇಶ್, ನೇತ್ರ, ಗೀತಾ, ನಾಜಿಮ್, ಎಜಾಜ್ ಇದ್ದರು. ಸಿಕೆಬಿ-2 ನಗರದ ವಾಪಸಂದ್ರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾರತೀಯ ವೈದ್ಯಕೀಯ ಸಂಘ ಚಿಕ್ಕಬಳ್ಳಾಪುರ ಜಿಲ್ಲಾ ಶಾಖೆ “ವಿಶ್ವ ಕ್ಯಾನ್ಸರ್ ದಿನದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮತ್ತು ತಡೆಗಟ್ಟುವಿಕೆ ಬಗ್ಗೆ ಅರಿವು ಮೂಡಿಸಲಾಯಿತು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ