ಮಹಾಂತೇಶ್ ನಿಧನಕ್ಕೆ ವಿಷ್ಣು ಸೇನಾ ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ

KannadaprabhaNewsNetwork |  
Published : Nov 25, 2026, 01:45 AM IST
24ಎಚ್ಎಸ್ಎನ್15 :  | Kannada Prabha

ಸಾರಾಂಶ

ಸಾಲಗಾಮೆ ರಸ್ತೆಯಲ್ಲಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪ್ರತಿಮೆ ಬಳಿ ಮಂಗಳವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಮಹಾಂತೇಶ್ ಅವರ ಒಡನಾಡಿಗಳು ಪಾಲ್ಗೊಂಡು ಅಗಲಿದ ನಾಯಕನಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೃತರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಎರಡು ನಿಮಿಷ ಮೌನಾಚರಣೆ ನಡೆಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಮಹಾಂತೇಶ್ ಅವರ ಸಂಘಟನಾ ಸೇವೆ, ಅಭಿಮಾನಿಗಳೊಂದಿಗಿನ ಒಡನಾಟ ಹಾಗೂ ವಿಷ್ಣು ಸೇನಾ ಸಂಘಟನೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ವಿಷ್ಣು ಸೇನಾ ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಬಿ. ಎನ್. ಮಹಾಂತೇಶ್ ಅವರ ನಿಧನಕ್ಕೆ ಹಾಸನ ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಸಾಲಗಾಮೆ ರಸ್ತೆಯಲ್ಲಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪ್ರತಿಮೆ ಬಳಿ ಮಂಗಳವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಮಹಾಂತೇಶ್ ಅವರ ಒಡನಾಡಿಗಳು ಪಾಲ್ಗೊಂಡು ಅಗಲಿದ ನಾಯಕನಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೃತರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಎರಡು ನಿಮಿಷ ಮೌನಾಚರಣೆ ನಡೆಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ಮಹಾಂತೇಶ್ ಅವರ ಸಂಘಟನಾ ಸೇವೆ, ಅಭಿಮಾನಿಗಳೊಂದಿಗಿನ ಒಡನಾಟ ಹಾಗೂ ವಿಷ್ಣು ಸೇನಾ ಸಂಘಟನೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ವಿಷ್ಣು ಸೇನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜಾ ವೆಂಕಟೇಶ್, ಉಪಾಧ್ಯಕ್ಷ ರಘುನಂದನ್, ಗೌರವ ಅಧ್ಯಕ್ಷ ಗಣೇಶ್, ಸಮಾಜ ಸೇವಕರಾದ ವಿಜಯ್ ಕುಮಾರ್, ರಾಮು, ಸತೀಶ್, ಕುಮಾರ್‌, ಜಯರಾಜ್ ಸೇರಿದಂತೆ ಅಪಾರ ಸಂಖ್ಯೆಯ ವಿಷ್ಣುವರ್ಧನ್ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದಲೇ ಆಶಾ ಮನವೊಲಿಕೆಗೆ ಸಿಎಂ ಯತ್ನ
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳ ಮಾರಾಟ: ಅಧಿಕಾರಿಗಳ ದಾಳಿ