-ಜಿಲ್ಲಾಧಿಕಾರಿ ಡಾ. ಸುಶೀಲಾ ಸಲಹೆ । ಬಿಸಿಗಾಳಿಯಿಂದ ಪ್ರತಿಕೂಲ ಪರಿಣಾಮ ತಗ್ಗಿಸಲು ಸಾರ್ವಜನಿಕರು ಮುಂಜಾಗ್ರತೆ ಕ್ರಮವಹಿಸಿ
ಕನ್ನಡಪ್ರಭ ವಾರ್ತೆ ಯಾದಗಿರಿ
ರಾಷ್ಟ್ರೀಯ ಹಾಗೂ ರಾಜ್ಯ ಹವಾಮಾನ ಇಲಾಖೆ ಇವರ ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪುವ ಸಂಭವವಿರುತ್ತದೆ ಎಂದು ಮುನ್ನೆಚ್ಚರಿಕೆ ನೀಡಿದ್ದರಿಂದ, ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿರುತ್ತದೆ, ಗರಿಷ್ಠ ತಾಪಮಾನ ಮತ್ತು ಬಿಸಿಗಾಳಿಯಿಂದ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರು ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ತಿಳಿಸಿದ್ದಾರೆ.ಬಿಸಿಗಾಳಿಗೆ ಸಲಹೆಗಳು: ಸಾಮಾನ್ಯ ಜನರಿಗೆ, ವಿಶೇಷವಾಗಿ ಮಧ್ಯಾಹ್ನ 12ರಿಂದ 3 ಗಂಟೆಯ ವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ, ತಿಳಿಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಛತ್ರಿ, ಟೋಪಿ, ಬೂಟು ಅಥವಾ ಚಪ್ಪಲಿ ಬಳಸಿ. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕಗಳನ್ನು ತಪ್ಪಿಸಿ. ಮಧ್ಯಾಹ್ನ 12ರಿಂದ 3ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು.
ನಿಮಗೆ ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಒಆರ್‌ಎಸ್, ಮನೆಯಲ್ಲಿ ತಯಾರಿಸಿದ ಪಾನೀಯ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿ ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಮ್ಮ ನೀರು ನೀಡಿ. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು ಅಥವಾ ಸನ್‌ಶೇಡ್ ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಬೇಕು.
ಚಿಕಿತ್ಸೆಗಾಗಿ ಸಲಹೆಗಳು: ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ ನೆರಳಿನ ಕೆಳಗೆ ಇರಿಸಿ. ಅವರನ್ನು ಒಮ್ಮೆ ಬಟ್ಟೆಯಿಂದ ಒರೆಸಿ, ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆ ಕಡಿಮೆ ಮಾಡುವುದು ಮುಖ್ಯ ವಿಷಯ. ವ್ಯಕ್ತಿಗೆ ಔಷಧಿ, ಕುಡಿಯಲು ಅಥವಾ ನಿಂಬೆ ಶರಬತ್, ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತ ಯಾವುದನ್ನಾದರೂ ನೀಡಿ. ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಬೇಕು. ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.====ಬಾಕ್ಸ್=====
- ರೈತರು, ಕೃಷಿ ಕಾರ್ಮಿಕರು ಮುಂಜಾಗ್ರತೆ !ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆ ಬಟ್ಟೆಬಳಸಬೇಕು. ಬಿಸಿಲಿನ ಅವಧಿಯಲ್ಲಿ ಕೊಡೆ ಬಳಸಿ. ಹತ್ತಿಯ ಉಡುವು ಧರಿಸಿ. ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ. ಸಾಕಷ್ಟು ನೀರು, ಮಜ್ಜಿಗೆ ಸೇವಿಸಿ. ವಾಸವಿರುವ ಕೋಣೆಯನ್ನು ತಂಪಾಗಿರಿಸಿ. ಬಿಸಿಗಾಳಿ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ ದ್ರವಾಹಾರ ನೀಡಿ. ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ. ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ ಎಂದು ಅವರು ತಿಳಿಸಿದ್ದಾರೆ.
-----14ವೈಡಿಆರ್1 : ಡಾ। ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ.