ಕರಾವಳಿಯಲ್ಲಿ ಜೂ.17ರ ತನಕ ಭಾರಿ ಮಳೆ ಮುನ್ಸೂಚನೆ: ಇಂದು ಶಾಲೆಗಳಿಗೆ ರಜೆ

KannadaprabhaNewsNetwork |  
Published : Jun 12, 2025, 01:22 AM IST
32 | Kannada Prabha

ಸಾರಾಂಶ

ಕರಾವಳಿಯಲ್ಲಿ ಗುರುವಾರ ಭಾರೀ ಮಳ‍ೆಯಾಗುವ ಸಾಧ್ಯತೆಯ ಹಿನ್ನೆಲೆಗೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ. ಭಾರೀ ಮಳೆಯಾಗುವ ಬಗ್ಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗರೂಕ ಕ್ರಮವಾಗಿ

ಕನ್ನಡಪ್ರಭ ವಾರ್ತೆ ಉಡುಪಿಕರಾವಳಿಯಲ್ಲಿ ಕಳ‍ೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮಂಗಳವಾರ ರಾತ್ರಿಯಿಂದ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಬುಧವಾರ ರಾತ್ರಿ ಭಾರೀ ಗಾಳಿ ಮಳೆಯಾಗಿದ್ದು, ಬುಧವಾರ ಹಗಲಿನಲ್ಲಿಯೂ ಉತ್ತಮ ಮಳೆಯಾಗಿದೆ.

ಕರಾವಳಿಯಲ್ಲಿ ಗುರುವಾರ ಭಾರೀ ಮಳ‍ೆಯಾಗುವ ಸಾಧ್ಯತೆಯ ಹಿನ್ನೆಲೆಗೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ. ಭಾರೀ ಮಳೆಯಾಗುವ ಬಗ್ಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗರೂಕ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.ಭಾರತೀಯ ಹವಾಮಾನ ಇಲಾಖೆ ಕೂಡ ಜೂ.17ರವರೆಗೆ ಭಾರೀ ಮಳೆ ಗಾಳಿಯಾಗುವ ಸಾಧ್ಯತೆ ಹೇಳಿದೆ. ಸಮುದ್ರ ತೀರದಲ್ಲಿ ಗಂಟೆಗೆ 40 - 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ತೀರ ಪ್ರದೇಶದ ಜನರು ಮುಂಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.

ಬುಧವಾರ ರಾತ್ರಿ ಜಿಲ್ಲೆಯಲ್ಲಿ ಸರಾಸರಿ 22 ಮಿ.ಮೀ. ಮಳೆ ದಾಖಲಾಗಿದೆ. ಕಾಪು ತಾಲೂಕಿನ ಉಳಿಯಾರಗೋಳಿ

ಗ್ರಾಮದ ವಾಸುದೇವ ಆಚಾರ್ಯ ಅವರ ಮನೆ ಗಾಳಿ ಮಳೆಗೆ ಭಾಗಶಃ ಹಾನಿಗೊಂಡು 62,000 ರು.ಗಳಷ್ಟು ಹಾನಿಯಾಗಿದೆ.ಅಧಿಕಾರಿಗಳಿಗೆ ಡಿಸಿ ಸೂಚನೆ: ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಪ್ರಕೃತಿ ವಿಕೋಪ ನಿರ್ವಹಣೆಗೆ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚಿಸಿದ್ದಾರೆ.ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ತುರ್ತುಕರೆಗಾಗಿ ಅಥವಾ ಹೆಚ್ಚಿನ ಮಾಹಿತಿಗಳಿಗಾಗಿ ಈ ಕೆಳಗಿನ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಮ್, ನಗರಸಭೆ ಅಥವಾ ತಾಲೂಕು ತಹಶೀಲ್ದಾರ್ ಕಚೇರಿಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ತುರ್ತುಸೇವೆಗೆ ಶುಲ್ಕರಹಿತ: 1077

ದೂರವಾಣಿ ಸಂಖ್ಯೆ 0820-2574802

ತಹಶೀಲ್ದಾರ್ ಕಚೇರಿ ಸಹಾಯವಾಣಿ ಸಂಖ್ಯೆ

ಉಡುಪಿ 0820-2520417

ಕುಂದಾಪುರ 08254-230357

ಕಾರ್ಕಳ 08258-230201

ಕಾಪು 0820-2551444

ಬ್ರಹ್ಮಾವರ 0820-2560494

ಬೈಂದೂರು 08254-251657

ಹೆಬ್ರಿ 08253-250201

ಉಡುಪಿ ನಗರಸಭೆ 0820-2593366, 0820-2520306

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌