ಭಾರೀ ಮಳೆ: ಇಂದು 10 ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ

KannadaprabhaNewsNetwork |  
Published : Jul 15, 2024, 01:47 AM IST
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಸ್ತೆಯಲ್ಲಿ ಭಾನುವಾರ ನೀರು ತುಂಬಿತ್ತು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಕಾರವಾರ: ಜಿಲ್ಲೆಯ ವಿವಿಧೆಡೆ ಭಾರೀ ಮಳೆ ಸುರಿಯುತ್ತಿದೆ. ಸೋಮವಾರ 10 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಶಿರಸಿ, ಸಿದ್ದಾಪುರಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕರಾವಳಿಯಲ್ಲಿ ಮತ್ತೆ ಪ್ರವಾಹದ ಆತಂಕ ಉಂಟಾಗಿದೆ. ಬಿಟ್ಟು ಬಿಟ್ಟು ಭಾರಿ ಮಳೆ ಬರುತ್ತಿದೆ. ಇದರಿಂದ ನೀರು ಹರಿದುಹೋಗುತ್ತಿದೆ.

ಕಾರವಾರ ತಾಲೂಕಿನ ಚೆಂಡಿಯಾ, ಪೋಸ್ಟ್‌ ಚೆಂಡಿಯಾ, ಸಕಲಭಾಗ, ಈಡೂರು ಮತ್ತಿತರ ಕಡೆಗಳಲ್ಲಿ ಮನೆ ಹಾಗೂ ರಸ್ತೆ ಜಲಾವೃತವಾಗಿದೆ. ನೌಕಾನೆಲೆ ನೀರು ಸರಾಗವಾಗಿ ಹರಿದುಹೋಗುವಲ್ಲಿ ನಿರ್ಮಾಣ ಕಾಮಗಾರಿ ಕೈಗೊಂಡಿದ್ದರಿಂದ ಒಂದು ಗಂಟೆ ಭಾರೀ ಮಳೆಯಾದರೂ ಈ ಪ್ರದೇಶದ ಮನೆಗಳು ಜಲಾವೃತವಾಗುತ್ತಿವೆ. ನಾಲ್ಕು ದಿನಗಳ ಹಿಂದೆ ಜಲಾವೃತವಾಗಿದ್ದ ಮನೆಗಳು ಮತ್ತೆ ಜಲಾವೃತವಾಗಿವೆ. ಚತುಷ್ಪಥ ಹೆದ್ದಾರಿಯ ಮೇಲೂ ನೀರು ನುಗ್ಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಇಂದು ಶಾಲೆಗಳಿಗೆ ರಜೆ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ನಿಂತ ನೀರು ಸಂಚಾರಕ್ಕೆ ತೊಡಕು

ಗೋಕರ್ಣ: ವಡ್ಡಿ ಮಾರ್ಗವಾಗಿ ಶಿರಸಿ- ಗೋಕರ್ಣ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 143ರ ಸಿದ್ದೇಶ್ವರದ ಬಳಿ ರಸ್ತೆ ಚರಂಡಿಯನ್ನು ಮುಚ್ಚಿದ ಪರಿಣಾಮ 20 ಅಡಿಗೂ ಅಧಿಕ ದೂರ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ.

ಭಾನುವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದ 4 ಅಡಿಗೂ ಹೆಚ್ಚು ನೀರು ನಿಂತು ಪತ್ರಿಕೆ ವಾಹನಗಳ ಸಂಚಾರಕ್ಕೆ ತೀವ್ರ ತೊಡಕಾಗಿತ್ತು. ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ಮುಂದುವರಿದಿದೆ. ಈಗಾಗಲೇ ಹಲವು ಪ್ರವಾಸಿ ವಾಹನಗಳು ನೀರಿನಲ್ಲಿ ಸಿಲುಕಿ ಪರದಾಡಿದ್ದು, ಅದೃಷ್ಟವಶಾತ್ ಜೀವಾಪಾಯದಿಂದ ಪಾರಾಗಿದ್ದಾರೆ.ದ್ವಿಚಕ್ರ ವಾಹನಗಳ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರು ಪ್ರಾಣಕ್ಕೆ ಅಪಾಯ ಆಗುವ ಸಾಧ್ಯತೆ ಇದೆ. ಜೀವಭಯದಲ್ಲೇ ಸಾಗಬೇಕಾಗಿದೆ. ತಕ್ಷಣ ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಥವಾ ಸ್ಥಳೀಯ ಗ್ರಾಮ ಪಂಚಾಯಿತಿಯವರು ಚರಂಡಿ ಮುಚ್ಚಿದವರ ವಿರುದ್ಧ ಕ್ರಮ ಜರುಗಿಸಿ ನೀರನ್ನು ಸರಾಗವಾಗಿ ಹರಿದು ಹೋಗುವಂತೆ ಮಾಡಿಕೊಡಬೇಕಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌