ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

KannadaprabhaNewsNetwork |  
Published : Oct 19, 2026, 02:45 AM IST
ಅಡಚಣೆ  | Kannada Prabha

ಸಾರಾಂಶ

ಇಲ್ಲಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಭಾರಿ ಬಿರುಸಿನ ಮಳೆ ಸುರಿದಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು.

ನಾಪೋಕ್ಲು : ಇಲ್ಲಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಭಾರಿ ಬಿರುಸಿನ ಮಳೆ ಸುರಿದಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು.ಪಟ್ಟಣ ಸೇರಿದಂತೆ ಬೇತು, ನೆಲಜಿ, ಕಕ್ಕಬೆ, ಎಮ್ಮೆಮಾಡು, ಹೊದ್ದೂರು, ಕೊಟ್ಟಮುಡಿ, ಪಾಲೂರು ಹಾಗೂ ಬೆಟ್ಟಗೇರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಗೆ ಜನಜೀವನ ಕೊಂಚ ಅಸ್ತವ್ಯಸ್ತಗೊಂಡಿತು.

ನಾಪೋಕ್ಲು - ಹಳೆ ತಾಲೂಕು ಮುಖ್ಯ ರಸ್ತೆಯ ಕೆಪಿಎಸ್ ಶಾಲೆ ಸಮೀಪ ರಸ್ತೆಯ ಮೇಲೆ ಅಪಾರ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಇಡೀ ರಸ್ತೆ ಕೆರೆಯಂತಾಗಿತ್ತು. ಇದರಿಂದಾಗಿ ಈ ಮರದಲ್ಲಿ ಸಂಚರಿಸುವ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನ ಸವಾರರು ಸಾಗಲು ಹರಸಾಹಸ ಪಡುವಂತಾಯಿತು.

ಈಗ ಸುರಿದಿರುವುದರಿಂದ ಈ ಭಾಗದ ಕೃಷಿಕರು ಹಾಗೂ ಕಾಫಿ-ಪೆಪ್ಪರ್ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಗಾನದಿಂದ ಪ್ರೌಢ ವ್ಯಕ್ತಿತ್ವ ರೂಪು: ರಮೇಶ್ ಭಟ್ ಎಸ್.ಜಿ
ಬಲಮುರಿ ಅಗಸ್ತೇಶ್ವರ ದೇವಾಲಯದಲ್ಲಿ ಪುಣ್ಯ ತೀರ್ಥಸ್ನಾನ, ಜಾತ್ರಾ ಮಹೋತ್ಸವ