ಕನ್ನಡಪ್ರಭ ವಾರ್ತೆ ಮೂಲ್ಕಿ
ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು ಗುತ್ತಿಗೆದಾರರ ಮೂಲಕ ಮರವನ್ನು ಹಾಗೂ ಹಾನಿಗೀಡಾದ ವಿದ್ಯುತ್ ಕಂಬವನ್ನು ತೆರವುಗೊಳಿಸಲಾಗಿದೆ.
ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಚಿತ್ರಾಪು ಎಣ್ಣೆ ಮಿಲ್ ಬಳಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ ವಾಲಿ ನಿಂತಿದ್ದು ಹೆಚ್ಚಿನ ಅಪಾಯ ತಪ್ಪಿದೆ. ಬಳಿಕ ದುರಸ್ತಿ ಪಡಿಸಲಾಗಿದೆ. ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಚಿತ್ರಾಪು, ಮಾನಂಪಾಡಿ, ಬಪ್ಪನಾಡು ಸೇರಿದಂತೆ ಶಾಂಭವಿ ನದಿ ತೀರಗಳಲ್ಲಿ ಮಳೆಗೆ ನೀರು ಉಕ್ಕೇರುತ್ತಿದ್ದು ಎಚ್ಚರಿಕೆಯಿಂದ ಇರಲು ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಪಡುಪಣಂಬೂರು- ಚಿತ್ರಾಪು ರಸ್ತೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ರಾಷ್ತ್ರೀಯ ಹೆದ್ದಾರಿ ಸೇರಿದಂತೆ ಒಳ ರಸ್ತೆಗಳಲ್ಲಿ ಕೂಡ ಮಳೆ ನೀರು ರಸ್ತೆಯಲ್ಲಿ ಹರಿದು ಸಂಚಾರಕ್ಕೆ ಸಮಸ್ಯೆಯಾಗಿದೆ.