ಜಿಲ್ಲೆಯಾದ್ಯಂತ ಬಿರುಸುಗೊಂಡ ಮಳೆ

KannadaprabhaNewsNetwork |  
Published : Jul 09, 2024, 12:48 AM IST
ಮಳೆ | Kannada Prabha

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಕೊಂಚ ಮಳೆ ಬಿರುಸುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ಕೊಂಚ ಮಳೆ ಬಿರುಸುಗೊಂಡಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೆಯೇ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.

ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಕೋರಿದ್ದಾರೆ.

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ತೋಜಿ ಬಳಿ ಮಳೆಯಿಂದಾಗಿ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.23 ಮಿ.ಮೀ. ಮಳೆಯಾಗಿದೆ.

ಕಳೆದ ವರ್ಷ ಇದೇ ದಿನ 37.91 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 996.55 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 507.84 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ 34.68 ಮಿ.ಮೀ. ಕಳೆದ ವರ್ಷ ಇದೇ ದಿನ 58.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1464.53 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 921.27 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ 11.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 33.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1018.60 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 445.21 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲೂಕಿನಲ್ಲಿ 15.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 38.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 994.03 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 362.53 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲೂಕಿನಲ್ಲಿ 11.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 39.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 805.51 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 412.06 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲೂಕಿನಲ್ಲಿ 7.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 700.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 398.15 ಮಿ.ಮೀ. ಮಳೆಯಾಗಿತ್ತು.

ಹೋಬಳಿ ವಿವರ : ಮಡಿಕೇರಿ ಕಸಬಾ 21.20, ನಾಪೋಕ್ಲು 19, ಸಂಪಾಜೆ 45.50, ಭಾಗಮಂಡಲ 53, ವಿರಾಜಪೇಟೆ 13.40, ಅಮ್ಮತ್ತಿ 9, ಹುದಿಕೇರಿ 14.20, ಶ್ರೀಮಂಗಲ 21.60, ಪೊನ್ನಂಪೇಟೆ 18, ಬಾಳೆಲೆ 9, ಸೋಮವಾರಪೇಟೆ ಕಸಬಾ 8.60, ಶನಿವಾರಸಂತೆ 5, ಶಾಂತಳ್ಳಿ 21, ಕೊಡ್ಲಿಪೇಟೆ 13.20, ಕುಶಾಲನಗರ 6.20, ಸುಂಟಿಕೊಪ್ಪ 9 ಮಿ.ಮೀ.ಮಳೆಯಾಗಿದೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ