ಜಿಲ್ಲೆಯಲ್ಲಿ ಹಲವೆಡೆ ವರ್ಷಧಾರೆ

KannadaprabhaNewsNetwork |  
Published : Mar 26, 2025, 01:36 AM IST
ಪೋಟೋ: 25ಎಸ್‌ಎಂಜಿಕೆಪಿ11ಹೊಸನಗರದ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹುಂಚ ಹೋಬಳಿ ಕರಿಗೆರಸು ಗ್ರಾಮದಲ್ಲಿ ಮಂಗಳವಾರ ಸುರಿದ ಮಳೆಗೆ ಅಡಕೆ ಮರಗಳು ನೆಲಕಚ್ಚಿರುವುದು.  | Kannada Prabha

ಸಾರಾಂಶ

ಶಿವಮೊಗ್ಗ: ಶಿವಮೊಗ್ಗ, ಹೊಸನಗರ ತಾಲೂಕು ಸೇರಿದಂತೆ ಹಲವಡೆ ಮಂಗಳವಾರ ವರ್ಷದ ಮೊದಲ ಮಳೆಯಾಗಿದೆ.

ಶಿವಮೊಗ್ಗ: ಶಿವಮೊಗ್ಗ, ಹೊಸನಗರ ತಾಲೂಕು ಸೇರಿದಂತೆ ಹಲವಡೆ ಮಂಗಳವಾರ ವರ್ಷದ ಮೊದಲ ಮಳೆಯಾಗಿದೆ.

ಸಂಜೆವರೆಗೆ ಬಿಸಿಲ ವಾತಾವರಣವಿದ್ದು, ಸಂಜೆ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಶಿವಮೊಗ್ಗ ತಾಲೂಕು ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಹೊಳೆಹೊನ್ನೂರು ಸುತ್ತಮುತ್ತ 20 ನಿಮಿಷಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯಾಯಿತು. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪೆರೆದಂತಾಗಿದೆ.ನೆಲ ಕಚ್ಚಿದ ಅಡಕೆ ಮರಗಳು:

ಹೊಸನಗರ ತಾಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ ವೇಳೆಗೆ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು, ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ.ಹುಂಚ ಹೋಬಳಿ ಕರಿಗೆರಸು ಗ್ರಾಮದ ಹಿಂಡ್ಲೆಮನೆ ರೈತ ಶ್ರೀನಿವಾಸ ಎಂಬುವರಿಗೆ ಸೇರಿದ ನೂರಾರು ಅಡಕೆ ಮರಗಳು ಮತ್ತು ತೆಂಗಿನಮರ ಧರೆಗುರುಳಿದ್ದು, ಕಾಳುಮೆಣಸು ಸೇರಿದಂತೆ ಇನ್ನಿತರ ಬೆಳೆ ಹಾನಿಯಾಗಿದೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.ಬಿರುಗಾಳಿ ಹೊಡೆತಕ್ಕೆ ನೂರಾರು ಅಡಕೆ ಗಿಡಗಳು ನೆಲಕ್ಕೆ ಬಿದ್ದಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಕ್ಷಾಂತರ ರು. ಸಾಲ ಮಾಡಿ ಬೆಳೆದ ಬೆಳೆ ಬಿರುಗಾಳಿಗೆ ಸಿಲುಕಿದ್ದು, ಸಂಪೂರ್ಣ ತೋಟವೇ ನಾಶವಾಗಿದೆ ಎಂದು ರೈತ ಶ್ರೀನಿವಾಸ ಅಳಲನ್ನು ತೋಡಿಕೊಂಡಿದ್ದಾರೆ.

ಈ ಭಾಗದಲ್ಲಿ ಬೀಸಿದ ಬಿರುಗಾಳಿಗೆ ಅಡಕೆ, ತೆಂಗು ಬೆಳೆ ಹಾಳಾಗಿದ್ದು, ಸಂಬಂಧಿಸಿದ ಇಲಾಖೆ ಬೆಳೆ ನಷ್ಟವಾಗಿರುವ ರೈತರಿಗೆ ಹೆಚ್ಚಿನ ಪರಿಹಾರ ಧನ ವಿತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇನ್ನೂ ಈ ಭಾಗದಲ್ಲಿ ಏಕಾಏಕಿ ಬಂದ ಭಾರಿ ಗಾಳಿ, ಮಳೆಗೆ ನೂರಾರು ಕಾಡು ಜಾತಿಯ ಮರಗಳು ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಹಲವೆಡೆ ಮನೆಗಳ ಮೇಲ್ಛಾವಣಿ ಹಾರಿಹೋದ ಬಗ್ಗೆ ವರದಿಯಾಗಿದೆ.

PREV

Recommended Stories

ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು