ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್ ) 2025–26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ನಾಡ್ಪಾಲು ಗ್ರಾಪಂ ವ್ಯಾಪ್ತಿಯ ಕಾಸನಮಕ್ಕಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿತು.
ಹೆಬ್ರಿ: ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್ ) 2025–26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ನಾಡ್ಪಾಲು ಗ್ರಾಪಂ ವ್ಯಾಪ್ತಿಯ ಕಾಸನಮಕ್ಕಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿತು.ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ನಾಡ್ಪಾಲು ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್ ಉದ್ಘಾಟಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಹೆಗ್ಡೆ ಮಾತನಾಡಿ, ಕಾಸನಮಕ್ಕಿ ಪರಿಸರವನ್ನು ಸಮೀಪದಿಂದ ಅರಿಯಲು ಈ ಶಿಬಿರ ಸಹಕಾರಿ ಎಂದರು.ಕಾಸನಮಕ್ಕಿಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ವಿಮಲಾ ಶುಭ ಹಾರೈಸಿದರು. ಊರಿನ ಹಿರಿಯರಾದ ರಾಮಣ್ಣ ಪೂಜಾರಿ ಅವರು ಸ್ವಾವಲಂಬಿ ಜೀವನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಪ್ರಾಂಶುಪಾಲ ಡಾ. ವಿದ್ಯಾದರ ಹೆಗ್ಡೆ ಎಸ್. ಮಾತನಾಡಿ, ಎನ್ನೆಸ್ಸೆಸ್ ಶಿಬಿರದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ವ್ಯಕ್ತಿ ಹಾಗೂ ವ್ಯಕ್ತಿತ್ವದ ವಿಕಸನಕ್ಕೆ ಮೂಲ ಮಾರ್ಗವಾಗುತ್ತದೆ ಎಂದು ಹೇಳಿದರು.ನಾಡ್ಪಾಲು ಗ್ರಾಪಂ ವಾರ್ಡ್ ಸದಸ್ಯ ರಾಘವೇಂದ್ರ ಹೆಗ್ಡೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸೌಮ್ಯ ಹೆಗ್ಡೆ, ಅಂಗನವಾಡಿ ಶಿಕ್ಷಕಿ ಹೇಮಾಶ್ರೀ, ಎನ್ನೆಸ್ಸೆಸ್ ನಾಯಕರಾದ ವಿನಾಯಕ, ಸಂಜನಾ, ಪ್ರಜ್ಞಾ, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪವಿತ್ರ ನಿರೂಪಿಸಿದರು. ಸಂಜನಾ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.