ಹೆಬ್ರಿ ಬ್ಲಾಕ್ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಪೂರ್ವತಯಾರಿಯ ನಿಮಿತ್ತ ನಡೆದ ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಕಾರ್ಯಕರ್ತರ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳತಳಮಟ್ಟದ ಗ್ರಾಮೀಣಾಭಿವೃದ್ಧಿಯ ಗುರಿ ಸಾಧನೆಗಾಗಿ ಪಂಚಾಯತ್‌ರಾಜ್ ವ್ಯವಸ್ಥೆ ಬಲಪಡಿಸಬೇಕಾದುದು ಇಂದಿನ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಪೂರ್ವತಯಾರಿಯ ನಿಮಿತ್ತ ನಡೆದ ಗ್ರಾಮ ಪಂಚಾಯಿತಿ ಸದಸ್ಯರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತಾಡಿದರು.ಕಾಂಗ್ರೆಸ್, ಸಾಮಾಜಿಕ ಕಾಳಜಿಯ ಕಾರ್ಯಸಾಧನೆಯ ಬದ್ಧತೆಯ ಮೇಲೆ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ, ಪಂಚಾಯತ್‌ರಾಜ್ ವ್ಯವಸ್ಥೆಯ ಬಗ್ಗೆ ಹಾಗೂ ಸಹಕಾರಿ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ರಾಜು ಪೂಜಾರಿ ಅವರನ್ನು ಚುನಾವಣಾ ಕಣಕ್ಕಿಳಿಸಿದೆ. ಗ್ರಾಮ ಪಂಚಾಯಿತಿ ಸದಸ್ಯನಾಗಿ, ಅಧ್ಯಕ್ಷನಾಗಿ, ತಾಲೂಕು ಪಂಚಾಯಿತಿ ಸದಸ್ಯನಾಗಿ, ಜಿಲ್ಲಾ ಪಂಚಾಯಿತಿ ಸದಸ್ಯ, ಅಧ್ಯಕ್ಷನಾಗಿ ಅವಿಭಜಿತ ದ.ಕ. ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಿ ಕೊಟ್ಟವರು ಎಂದು ಹೇಳಿದರು.ಕೆಪಿಸಿಸಿ ಪ್ರಚಾರ ಸಮಿತಿ ಸದಸ್ಯ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿದರು.ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ತನ್ನ ಸಾಧನೆಗಳನ್ನು ಕಾರ್ಯಕರ್ತರ ಮುಂದಿಟ್ಟು ಮತಯಾಚಿಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೆಪಿಸಿಸಿ ಉಸ್ತವಾರಿ ಎಂ.ಎಸ್. ಮಹಮ್ಮದ್, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಚಂದ್ರಶೇಖರ ಬಾಯಿರಿ, ಅಲ್ಪ ಸಂಖ್ಯಾತ ಘಟಕಾಧ್ಯಕ್ಷ ಸಯಿಫುದ್ದೀನ್ ಉಪಸ್ಥಿತರಿದ್ದರು.ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದಾರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.