ಕನ್ನಡಪ್ರಭ ವಾರ್ತೆ ಕಾರ್ಕಳ
ಕಾರ್ಯಕ್ರಮದಲ್ಲಿ ತರಬೇತುದಾರರು ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃ ಜೋಸೆಫ್ ಜೆ.ಎಂ. ರೆಬೆಲ್ಲೋ ಮಾತನಾಡಿ, ಮಳೆ ನೀರು ಕೊಯ್ಲಿನ ಅಗತ್ಯತೆ, ಅದರ ಪ್ರಯೋಜನಗಳು ಮತ್ತು ನೀರಿನ ಸಮರ್ಪಕ ನಿರ್ವಹಣೆ ಕುರಿತಂತೆ ಪ್ರಾತ್ಯಕ್ಷಿಕೆಯೊಂದಿಗೆ ಉಪನ್ಯಾಸ ನೀಡಿದರು.
ಉಡುಪಿ ಜಿಲ್ಲಾ ಪಂಚಾಯಿತಿ ಎಚ್.ಆರ್.ಡಿ. ಪರಿಣಿತರಾದ ಶ್ರೀಧರ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಉಡುಪಿ ಜಿಲ್ಲಾಡಳಿತದ ನೀರಿನ ವ್ಯವಸ್ಥೆ ಹಾಗೂ ಸದ್ಬಳಕೆ ಕುರಿತು ವಿವರಿಸಿದರು.ಕಾಲೇಜಿನ ಪ್ರಾಂಶುಪಾಲ ಡಾ. ವಿಧ್ಯಾಧರ ಎಸ್. ಹೆಗಡೆ ಅಧ್ಯಕ್ಷತೆ ವಹಿಸಿ, ನೀರಿನ ಸಂರಕ್ಷಣೆಯ ಕುರಿತ ತಮ್ಮ ಅನುಭವವನ್ನು ಹಂಚಿಕೊಂಡರು.
ಐಕ್ಯೂಎಸಿ ಸಂಚಾಲಕರಾದ ಡಾ. ಗಣೇಶ್ ಎಸ್., ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕರಾದ ಸುಷ್ಮಾ ರಾವ್, ಹೆಬ್ರಿ ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀ ವಾಸುದೇವ, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ ಶೆಟ್ಟಿ ನಿರೂಪಿಸಿ, ವಂದಿಸಿದರು.