ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆ: ಸಚಿವರಿಗೆ ಮನವಿ

KannadaprabhaNewsNetwork |  
Published : Aug 05, 2026, 02:45 AM IST
ಹೆಜಮಾಡಿ - ಪಡುಬಿದ್ರಿ ಟೋಲ್ ಸಮಸ್ಯೆ ಪರಿಹಾರಕ್ಕೆ ಸಚಿವ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು | Kannada Prabha

ಸಾರಾಂಶ

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ-ಪಡುಬಿದ್ರಿ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿಯು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಆರೋಗ್ಯ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಕಾಪು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ-ಪಡುಬಿದ್ರಿ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಹೆಜಮಾಡಿ–ಪಡುಬಿದ್ರಿ ಟೋಲ್ ಹೋರಾಟ ಸಮಿತಿಯು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಆರೋಗ್ಯ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಟೋಲ್‌ ನಿಂದ ಪಡುಬಿದ್ರಿ ವ್ಯಾಪ್ತಿಯ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದ ನಿಯೋಗವು, ಸ್ಥಳೀಯರಿಗೆ ಶಾಶ್ವತ ಟೋಲ್ ವಿನಾಯಿತಿ ಅಥವಾ ಸ್ಥಳೀಯ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿತು.

ಅಲ್ಲದೆ ಇಲ್ಲಿನ ಲೋಕೋಪಯೋಗಿ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್ ನಲ್ಲಿ ಶುಲ್ಕ ಸಂಗ್ರಹಣೆಯ ಕಾನೂನುಬದ್ಧತೆಯನ್ನು ಪರಿಶೀಲಿಸುವಂತೆ, ಈ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಗೆ ಅನಗತ್ಯ ತೊಂದರೆ ನೀಡುವುದನ್ನು ತಪ್ಪಿಸುವಂತೆ ಮನವಿ ಮಾಡಲಾಯಿತು. ಮನವಿ ಸ್ವೀಕರಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷ ವೈ. ಸುಕುಮಾರ್, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಜೆ. ಶೆಟ್ಟಿ, ಅಬ್ದುಲ್ ಅಜೀಜ್ ಹೆಜಮಾಡಿ, ಪಕ್ಷದ ಪ್ರಮುಖರಾದ ಪ್ರಭೋದ್ ಚಂದ್ರ ಹೆಜಮಾಡಿ, ರಮೀಜ್ ಹುಸೇನ್, ಮೊಹಮ್ಮದ್ ನಿಯಾಜ್, ಕೇಶವ್ ಸಿ. ಸಾಲ್ಯಾನ್ ಹಾಗೂ ಲಕ್ಷ್ಮೀಶ ತಂತ್ರಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಬಲಪಡಿಸಲು ಸಂಘಟನ ಸೃಜನ ಅಭಿಯಾನ: ಎಸ್.ಆರ್.ಪಾಟೀಲ
ತುಳುನಾಡಿನ ಸೊಬಗನ್ನು ತೆರೆದಿಟ್ಟ ‘ಆಟಿದ ಕಮ್ಮೆನ’ ಕಾರ್ಯಕ್ರಮ