ಕನ್ನಡಪ್ರಭ ವಾರ್ತೆ ಕೋಲಾರಇತ್ತೀಚೆಗೆ ಕೋಲಾರ ನಗರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾವು ನೋವುಗಳು ಸಂಭವಿಸುತ್ತಿದೆ, ಈ ಅಪಘಾತಗಳಲ್ಲಿ ಬಹುತೇಕ ಬೈಕ್ ಸವಾರರೇ ಹೆಚ್ಚು ಸಾವನ್ನಪ್ಪುತ್ತಿರುವ ಘಟನೆಗಳು ಮರುಕಳಿಸುತ್ತಿರುವುದರಿಂದ ಪೊಲೀಸ್ ಇಲಾಖೆ ಹೆಲ್ಮೆಟ್ ಕಡ್ಡಾಯ ಮಾಡಲು ನಿರ್ಧರಿಸಿದೆ.ನಗರದಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿದ್ದು ಅದರಲ್ಲೂ ದ್ವಿಚಕ್ರ ವಾಹನ ಸವಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಡಿ. 1ರಿಂದ ಹೆಲ್ಮೆಟ್ ಕಡ್ಡಾಯಈ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಜೊತೆಗೆ ಡಿಸೆಂಬರ್ ೧ರಿಂದ ಕೋಲಾರ ನಗರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಹೆಲ್ಮೆಟ್ ಧರಿಸುವುದರಿಂದ ವಾಹನ ಸವಾರರು ಆಯತಪ್ಪಿ ಕೆಳಗೆ ಬೀಳುವುದು ಅಥವಾ ಯಾವುದೇ ಅಪಘಾತಗಳಾದ ತಲೆಗೆ ಯಾವುದೇ ಗಂಭೀರ ಗಾಯಗಳಾಗುವುದಿಲ್ಲ. ಆಗ ಸಂಭವಿಸಬಹುದಾದ ಸಾವು ನೋವನ್ನು ತಪ್ಪಿಸಬಹುದಾಗಿದೆ.
ಮನುಷ್ಯನ ದೇಹದ ಯಾವುದೇ ಭಾಗಕ್ಕೂ ಪೆಟ್ಟು ಬಿದ್ದರೆ ಚಿಕಿತ್ಸೆಯಿಂದ ಗುಣಮುಖವಾಗಬಹುದು, ಆದರೆ ತಲೆಗೆ ಗಾಯವಾದರೆ ಮನುಷ್ಯನ ಜೀವಕ್ಕೆ ಹಾನಿ ತಪ್ಪಿದ್ದಲ್ಲ, ಆದ್ದರಿಂದ ಅಪಘಾತ ಸಂದರ್ಭದಲ್ಲಿ ಆಗಬಹುದಾದ ಸಾವು ನೋವುಗಳನ್ನು ತಪ್ಪಿಸಲು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಧರಿಸುವುದು ಸೂಕ್ತ.ಜನಜಾಗೃತಿ ಕಾರ್ಯಕ್ರಮ
ಹೆಲ್ಮೆಟ್ ಕಡ್ಡಾಯಗೊಳಿಸುವ ಮೊದಲು ಸಾರ್ವಜನಿಕರಿಗೆ ಹೆಲ್ಮೆಟ್ ಧರಿಸದಿದ್ದರೆ ಆಗುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜಾಗೃತಿ ಕಾರ್ಯಕ್ರಮಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದ್ದು ಜೊತೆಗೆ ಪೋಷಕರು ಅಪ್ರಾಪ್ತ ಮಕ್ಕಳಿಗೆ ಬೈಕ್ ಚಲಾಯಿಸಲು ನೀಡಬಾರದು ಅಂತಹ ಘಟನೆ ಕಂಡುಬಂದರೆ ಪೋಷಕರಿಗೆ ಶಿಕ್ಷೆ ವಿಧಿಸುವ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತಿದೆ.ಹೆಲ್ಮೆಟ್ ಧರಿಸದಿದ್ದರೆ ದಂಡಕೋಲಾರ ಟ್ರಾಫಿಕ್ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಭಾರತಿ ಅವರು ಪ್ರತಿಕ್ರಿಯೆ ನೀಡಿದ್ದು, ಕೋಲಾರ ನಗರದಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿರುವ ಕಾರಣ ಅಪಘಾತಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಇದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಿರಿಯ ಪೊಲೀಸ್ ಅಧಿಕಾರಿಗಳ ಅದೇಶದಂತೆ ಡಿಸೆಂಬರ್ ೧ ರಿಂದ ಹೆಲ್ಮೆಟ್ ಕಡ್ಡಾಯಗೊಳಿಸಲಾಗುತ್ತಿದೆ, ಪ್ರತಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕಿದ್ದು ಹೆಲ್ಮೆಟ್ ಧರಿಸದಿದ್ದರೆ ಯಾವುದೇ ಮುಲಾಜಿಲ್ಲದೆ ದಂಢ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪೋಷಕರು ಯಾವುದೇ ಕಾರಣಕ್ಕೂ ಅಪ್ರಾಪ್ತ ಮಕ್ಕಳಿಗೆ ತಮ್ಮ ದ್ವಿ ಚಕ್ರ ವಾಹನಗಳನ್ನು ನೀಡಬಾರದು. ಒಂದು ವೇಳೆ ಅಪ್ರಾಪ್ತ ಮಕ್ಕಳು ಬೈಕ್ ಚಾಲನೆ ಮಾಡಿದರೆ ಅಂತಹ ಮಕ್ಕಳ ಪೋಷಕರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು. ಕೋಟ್................................ಜಿಲ್ಲೆಯಲ್ಲಿ ಡಿಸೆಂಬರ್ 1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗುತ್ತಿದ್ದು ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸಿದರೆ ಪಾಣಾಪಾಯವನ್ನು ತಪ್ಪಿಸಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯ ಆದೇಶದಂತೆ ಜೀವ ರಕ್ಷಣೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯ. ಈ ನಿಯಮವನ್ನು ಉಲ್ಲಂಘಿಸುವ ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸಲಾಗುವುದು.
- ನಿಖಿಲ್, ಎಸ್ಪಿ, ಕೋಲಾರ.