ಕನಕಪುರ: ದೇಶದ ಭದ್ರತೆ ಮತ್ತು ಸಮಗ್ರ ಅಭಿವೃದ್ಧಿಗೆ ಯುವಕರು ಬಿಜೆಪಿ ಜೊತೆಗೆ ಕೈಜೋಡಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ್‌ಗೌಡ ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದಲ್ಲೇ ಮೂರನೇ ಆರ್ಥಿಕ ದೇಶವನ್ನಾಗಿಸಲು ದೃಢ ಸಂಕಲ್ಪ ಮಾಡಿದ್ದಾರೆ. ಹಾಗಾಗಿ ಪ್ರಜ್ಞಾವಂತ ಯುವಕರು ಬಿಜೆಪಿಯ ಸದಸ್ಯತ್ವ ಪಡೆದು ಮೋದಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ದೇಶದಲ್ಲಿ ಬಿಜೆಪಿ ಅಭಿವೃದ್ಧಿ ಮೆಚ್ಚಿ ಜನರು ಸ್ವಯಂ ಪ್ರೇರಿತರಾಗಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ದೇಶದ ಜನರು ಬಿಜೆಪಿ ಪರ ಒಲವು ತೋರಿರುವುದು ವಿರೋಧಿಗಳಿಗೆ ನಡುಕ ಶುರುವಾಗಿದೆ. ಪಕ್ಷ ಹಾಗೂನಾಯಕರ ಮೇಲೆ ಇಲ್ಲ- ಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಅವರ ಹತಾಶ ಭಾವನೆ ತೋರಿಸುತ್ತದೆ ಎಂದರು.ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ಯುವಕರಿಗೆ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವ ಮುಖಂಡರನ್ನು ನೋಂದಣಿ ಮಾಡಿಕೊಂಡು ಅವರಿಗೆ ಜವಾಬ್ದಾರಿ ಕೊಟ್ಟು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವುದೇ ನಮ್ಮ ಉದ್ದೇಶ ಎಂದರು.
ಕೆ ಕೆ ಪಿ ಸುದ್ದಿ 02:ಕನಕಪುರ ತಾಲೂಕಿನ ಅರ್ಜನಹಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ್ ಗೌಡ ಚಾಲನೆ ನೀಡಿದರು.