ಬಾಲಕಾರ್ಮಿಕ ಪದ್ಧತಿ ಬೇರು ಸಮೇತ ಕಿತ್ತೆಸೆಯಲು ಸಹಕರಿಸಿ: ನ್ಯಾಯಾಧೀಶೆ ಪ್ರಮೀಳಾ ಎಂ.

KannadaprabhaNewsNetwork |  
Published : Jun 13, 2026, 02:00 AM IST
ಯಲಬುರ್ಗಾದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಮೀಳಾ ಎಂ., ಸಿವಿಲ್, ನ್ಯಾಯಾಧೀಶ ಸಂಜುಕುಮಾರ ಪಚ್ಚಪೂರೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳ ಬಾಲ್ಯವನ್ನು ಕಸಿಯುತ್ತಿರುವ ಬಾಲ ಕರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತೆಸೆಯಲು ಸಂಬಂಧಿಸಿದ ಇಲಾಖೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಮೀಳಾ ಎಂ. ಹೇಳಿದರು.

ಯಲಬುರ್ಗಾ: ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳ ಬಾಲ್ಯವನ್ನು ಕಸಿಯುತ್ತಿರುವ ಬಾಲ ಕರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತೆಸೆಯಲು ಸಂಬಂಧಿಸಿದ ಇಲಾಖೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಮೀಳಾ ಎಂ. ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ (ಪ್ರೌಢ ವಿಭಾಗ) ಕಾಲೇಜು ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕಾಡಳಿತ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರೌಢ ಶಾಲೆಯಿಂದ ಪ್ರಾರಂಭಗೊಂಡ ಜಾಗೃತಿ ಜಾಥಾ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ಸಾಗಿತು.

ಸಿವಿಲ್ ನ್ಯಾಯಾಧೀಶ ಸಂಜುಕುಮಾರ ಪಚ್ಚಪೂರೆ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ತಹಸೀಲ್ದಾರ್ ಪ್ರಕಾಶ ನಾಶಿ, ವಕೀಲರ ಸಂಘದ ಅಧ್ಯಕ್ಷ ಸುಭಾಷ್ ಹೊಂಬಳ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್, ಉಪಾಧ್ಯಕ್ಷ ಎಂ.ಎಸ್. ನಾಯ್ಕರ್, ಎಎಸ್ಐ ಕಲ್ಲಪ್ಪ ತಳಕಲ್, ಪ್ರೌಢಶಾಲೆಯ ಮುಖ್ಯಶಿಕ್ಷಕ ದುರಗಪ್ಪ, ವಕೀಲರಾದ ಎ‌.ಎಂ. ಪಾಟೀಲ್, ಹಸನ್‌ಸಾಬ್ ನದಾಫ್, ಚನ್ನಬಸನಗೌಡ ಕೆಂಚಮ್ಮನವರ್, ಕಾರ್ಮಿಕ ಇಲಾಖೆ ಸಿಬ್ಬಂದಿ ವೀರೇಶ, ಮಹೇಶ ಮತ್ತು ನ್ಯಾಯಾಲಯದ ಸಿಬ್ಬಂದಿ ರಾಘವೇಂದ್ರ, ವಿನಾಯಕ ಇದ್ದರು.

ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಸಹಕಾರ ಅಗತ್ಯ

ಕುಷ್ಟಗಿ: ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಕಳಂಕವಾಗಿದ್ದು, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್‌. ಮಂಜುನಾಥ ಹೇಳಿದರು.ಪಟ್ಟಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಹಾಗೂ ಕಾಯಂ ಲೋಕ ಅದಾಲತ್ ಪ್ರಯೋಜನಗಳ ಕುರಿತು ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳನ್ನು ದುಡಿಮೆಗೆ ತಳ್ಳುವುದು ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಪ್ರತಿಯೊಂದು ಮಗು ಶಿಕ್ಷಣ ಪಡೆಯುವ ಹಕ್ಕನ್ನು ಹೊಂದಿದ್ದು, ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಮಾಜದ ಎಲ್ಲ ವರ್ಗಗಳ ಸಹಕಾರ ಅಗತ್ಯ ಎಂದು ತಿಳಿಸಿದರು.ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಂ.ಎಲ್‌. ಪೂಜೇರಿ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಸುರಕ್ಷಿತ ವಾತಾವರಣ ಒದಗಿಸಿದಾಗ ಮಾತ್ರ ದೇಶದ ಭವಿಷ್ಯ ಉಜ್ವಲವಾಗಲಿದೆ ಎಂದು ತಿಳಿಸಿದರು.

ಜಾಗೃತಿ ಜಾಥಾ ಪಟ್ಟಣದ ನ್ಯಾಯಾಲಯ ಆವರಣದಿಂದ ಮಲ್ಲಯ್ಯ ವೃತ್ತದ ವರೆಗೆ ನಡೆಯಿತು.ಈ ಸಂದರ್ಭದಲ್ಲಿ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಮಹಾಂತೇಶ ಚೌವಲಗಿ, ಕಾರ್ಮಿಕ ಇಲಾಖೆ ನಿರೀಕ್ಷಕಿ ನಿವೇದಿತಾ, ರಾಯನಗೌಡ ಎಲ್., ಎಚ್.ಆರ್. ನಾಯಕ್, ಇಂದಿರಾ ಸುಹಾಸಿನಿ, ಶಶಿಧರ್ ಶೆಟ್ಟರ್, ಎಂ.ಎಸ್. ಹೇರೂರ್, ಪರಸಪ್ಪ ಗುಜಮಾಗಡಿ, ಕ್ರೈಂ ಪಿಎಸೈ ಪುಂಡಲೀಕಪ್ಪ, ಶಿವಪ್ಪ, ದೈಹಿಕ ಪರಿವೀಕ್ಷಕ ನಾಗಪ್ಪ ಬಿಳೀಯಪ್ಪನವರು ಸೇರಿದಂತೆ ವಕೀಲರು, ಶಾಲೆಯ ಮುಖ್ಯಶಿಕ್ಷಕರು, ವಿದ್ಯಾರ್ಥಿನಿಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ, ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳು ತಂತ್ರಜ್ಞಾನ ಅಭಿವೃದ್ಧಿ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಿ