ಕನ್ನಡ ಪ್ರಭ ವಾರ್ತೆ ಶಿವಮೊಗ್ಗ
ಭಾನುವಾರ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿ ವತಿಯಿಂದ ಏರ್ಪಡಿಸಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನಡೆ ಮತಗಟ್ಟೆಗಳ ಕಡೆ ಕಾರ್ಯಕ್ರಮದ ಅಂಗವಾಗಿ ಇಂದು ಎಲ್ಲ ತಾಲೂಕುಗಳಲ್ಲಿ ಧ್ವಜಾರೋಹಣ ನಡೆದಿದ್ದು, ಜಿಲ್ಲೆಯ 36ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಮಾದರಿ ಮತಗಟ್ಟೆಗಳ ಮೂಲಕ ಚುನಾವಣಾ ಪ್ರಕ್ರಿಯೆ ವೀಕ್ಷಣೆ ಮತ್ತು ಮಾಹಿತಿಯನ್ನು ಮತದಾರರಿಗೆ ಒದಗಿಸಲಾಗುವುದು ಎಂದರು.
ಮಹಾನಗರ ಪಾಲಿಕೆ ಅಧಿಕಾರಿ ಸುಪ್ರಿಯ ಮಾತನಾಡಿ, ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಮತದಾನದ ಪ್ರಮಾಣ ಹೆಚ್ಚಿದೆ. ಆದರೆ ಶಿವಮೊಗ್ಗ ನಗರ ಮತ್ತು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ನಾವೆಲ್ಲ ಮತದಾನ ಮಾಡೋಣ ಎಂದು ತಿಳಿಸಿದರು.ಸ್ವೀಪ್ ಐಕಾನ್ ಹಾಗೂ ಮನೋವೈದ್ಯ ಡಾ.ಶುಬ್ರತಾ ಮಾತನಾಡಿ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಮತದಾನ ಮಾಡುವುದು ಬಹಳ ಮುಖ್ಯವಾಗಿ ರುತ್ತದೆ. ಮೇ. 7ಕ್ಕೆ ಯಾವುದೇ ಕಾರ್ಯಕ್ರಮಗಳನ್ನು ಇಟ್ಟುಕೊಳ್ಳದೆ ಎಲ್ಲರೂ ಮತದಾನ ಮಾಡಿರೆಂದು ಅರಿವು ಮೂಡಿಸಿದರು.
ಇದೇ ವೇಳೆ ಜಿಲ್ಲಾ ಪಂಚಾಯತ್‍ನಲ್ಲಿ ಮಾದರಿ ಮತಗಟ್ಟೆ ಸ್ಥಾಪಿಸಿ, ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟು, ಮತದಾನ ಪ್ರಕ್ರಿಯೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ನಮ್ಮ ನಡೆ ಮತಗಟ್ಟೆ ಕಡೆ ಜಾಥಾವು ಜಿಲ್ಲಾಡಳಿತ ಕಚೇರಿಯಿಂದ ಆರಂಭಗೊಂಡು ಜಿಲ್ಲಾ ಪಂಚಾಯಿತಿ ಆವರಣವನ್ನು ತಲುಪಿತು. ಜಾಥಾದಲ್ಲಿ ಹೊಳೆಹೊನ್ನೂರು ಚಂದ್ರನಾಯ್ಕ್ ಡೊಳ್ಳು ಕುಣಿತ ತಂಡದವರು ಪಾಲ್ಗೊಂಡು ಎಲ್ಲರ ಗಮನ ಸೆಳೆದರು.
ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ವತಿಯಿಂದ ಹಲವಾರು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ‘ಸ್ವೀಪ್ ಕಪ್’ ವಿಭಿನ್ನವಾದ ಪ್ರಯತ್ನವಾಗಿದೆ. ಎಲ್ಲ ಕ್ರೀಡಾಪಟುಗಳು ಸ್ಮರ್ಧಾತ್ಮಕವಾಗಿ ಪಾಲ್ಗೊಳ್ಳುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಮತದಾನ ಜಾಗೃತಿ ಕುರಿತು ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಚಟುವಟಿಕೆ ಗಳನ್ನು ಕೈಗೊಳ್ಳುತ್ತಿದ್ದು, ಅದರಲ್ಲಿ ಸ್ವೀಪ್ ಕಪ್ ಕೂಡ ಒಂದಾಗಿದೆ. ಸ್ಪರ್ಧಾಳುಗಳೆಲ್ಲ ಸ್ಪರ್ಧಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಮತದಾನ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಯು ಮಾದರಿಯಾಗಬೇಕೆಂದು ಆಶಿಸಿದರು.ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ ಮಾತನಾಡಿ, ಮತದಾನ ಜಾಗೃತಿ ಕುರಿತು ಸ್ವೀಪ್ ವತಿಯಿಂದ ವಿಶಿಷ್ಟ, ವಿಭಿನ್ನ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ಮೇ 7 ರಂದು ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು ಎಂದರು.