ಅಂಗನವಾಡಿ ಕೇಂದ್ರಗಳಿಗೆ ಆಟಿಕೆ, ಉಪಕರಣ ಕೊಡುಗೆ

KannadaprabhaNewsNetwork |  
Published : Feb 06, 2026, 02:45 AM IST
ಚಿತ್ರ : 5ಎಂಡಿಕೆ2 : ಅಂಗನವಾಡಿ ಕೇಂದ್ರಗಳಿಗೆ ಮಿಸ್ಟಿ ಹಿಲ್ಸ್ ವತಿಯಿಂದ ಕೊಡುಗೆ ನೀಡಲಾಯಿತು.  | Kannada Prabha

ಸಾರಾಂಶ

ಮಡಿಕೇರಿ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಗತ್ಯ ಉಪಕರಣಗಳು, ಆಟಿಕೆ

ಮಡಿಕೇರಿ: ಮಡಿಕೇರಿ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಗತ್ಯ ಉಪಕರಣಗಳು, ಆಟಿಕೆಗಳನ್ನು ಕೊಡುಗೆಯಾಗಿ ನೀಡಲಾಯಿತು.ಮಡಿಕೇರಿ ತಾಲೂಕಿನ ಕಗ್ಗೋಡ್ಲು, ಸುಭಾಷ್ ನಗರ, ಹೂಕಾಡು ಸೈಸಾರಿಯ ಅಂಗನವಾಡಿ ಕೇಂದ್ರಗಳಿಗೆ ರೋಟರಿ ಜಿಲ್ಲೆಯ ರಾಜ್ಯಪಾಲ ಪಿ.ಕೆ. ರಾಮಕೖಷ್ಣ, ಉಪರಾಜ್ಯಪಾಲ ಧಿಲನ್ ಚಂಗಪ್ಪ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ವಿವಿಧ ಆಟಿಕೆಗಳು, ಅಗತ್ಯ ಉಪಕರಣಗಳನ್ನು ಕೊಡುಗೆಯಾಗಿ ನೀಡಿದರು.ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಚತೆ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪಿ.ಕೆ. ರಾಮಕೃಷ್ಣ, ಮಕ್ಕಳಿಗೆ ಬಾಲ್ಯದಲ್ಲೇ ಶುಚಿತ್ವದ ತಿಳಿವಳಿಕೆ ನೀಡುವ ಕಾರ್‍ಯ ಶ್ಲಾಘನೀಯ ಎಂದರು.ರೋಟರಿ ಮಿಸ್ಟಿ ಹಿಲ್ಸ್ ಕಾರ್‍ಯದಶಿ೯ ಬಿ.ಕೆ. ಕಾರ್ಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ಮೇಪಾಡಂಡ ಸವಿತಾ ಕೀತ೯ನ್, ಅಂಗನವಾಡಿ ಕಾರ್‍ಯಕತೇಯರಾದ ಜಯಶ್ರೀ ರೈ, ವೀಣಾ, ಸರಸ್ವತಿ, ಸಹಾಯಕಿ ಲೀಲಾ, ಪ್ರೇಮ, ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕರು ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌