ಕಿವಿ ತಪಾಸಣೆ, ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

KannadaprabhaNewsNetwork |  
Published : Jan 12, 2026, 02:45 AM IST
ಕಾರ್ಕಳ: ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ | Kannada Prabha

ಸಾರಾಂಶ

ಕಾರ್ಕಳದ ರಾಜಾಪುರ ಸರಸ್ವತ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಅವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ರಾಜಾಪುರ ಸರಸ್ವತ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಅವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮ ಭಾನುವಾರ ರಾಜಾಪುರ ಸರಸ್ವತ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಯ ಸಾರಸ್ವತ ಸೌಧ ಸಭಾಂಗಣದಲ್ಲಿ ನಡೆಯಿತು.ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಸುರೇಂದ್ರ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಶಿಬಿರದ ಪ್ರಯೋಜನವು ನಿಜವಾಗಿಯೂ ಅಗತ್ಯವಿರುವವರಿಗೆ ತಲುಪಲಿ ಎಂದು ಆಶಯ ವ್ಯಕ್ತಪಡಿಸಿದರು.

ವೈದ್ಯರಾದ ಡಾ. ಅಂಕಿತಾ ಕಲ್ಮಾಡಿ ಮಾತನಾಡಿ, ಪಂಚೇಂದ್ರಿಯಗಳಲ್ಲಿ ಕಿವಿಯ ಮಹತ್ವ ಅಪಾರವಾಗಿದೆ. ಸ್ಥಳೀಯವಾಗಿ ದೊರೆಯುವ ಸರಿಯಾದ ಉಪಕರಣಗಳನ್ನು ಬಳಸಿಕೊಂಡು ಸಮಯಕ್ಕೆ ಸರಿಯಾಗಿ ಶ್ರವಣ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದ್ದು, ಸಮಸ್ಯೆ ಗಂಭೀರವಾಗುವ ಮುನ್ನ ಡಿಜಿಟಲ್ ಶ್ರವಣ ಉಪಕರಣಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಹರೀಶ್ ಆಚಾರ್ಯ, ಡಾ. ಅಂಕಿತಾ ಕಲ್ಮಾಡಿ, ಟೀಮ್ ಈಶ್ವರ್ ಮಲ್ಪೆ ತಂಡದ ಲವ್ ಬಂಗೇರ ಉಪಸ್ಥಿತರಿದ್ದರು. ಸೊಸೈಟಿಯ ಹಿರಿಯ ವ್ಯವಸ್ಥಾಪಕರಾದ ಉದಯ ಪ್ರಭು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಬಳಿಕ ತಪಾಸಣೆ ನಡೆಸಿ ದ . ಡಾ. ಅಂಕಿತಾ ಕಲ್ಮಾಡಿ ಅವರು ಕಿವಿಯ ಶ್ರವಣ ತಪಾಸಣೆಯನ್ನು ನಡೆಸಿ , ಅರ್ಹರಿಗೆ ಶ್ರವಣ ಯಂತ್ರಗಳನ್ನು ವಿತರಿಸಲಾಯಿತು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ