ದೊಡ್ಡಬಳ್ಳಾಪುರ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡಲು ಎಲ್ಲರೂ ಸಹಕರಿಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಡಿಸೆಂಬರ್ 21ರಿಂದ 24ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಒಟ್ಟು 99828 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಮತ್ತು ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು (ಎಚ್ಆರ್‌ಎ) ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ.
ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ಜಿಲ್ಲಾದ್ಯಂತ ಒಟ್ಟು 476 ಬೂತ್‌ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆಯನ್ನು ಹಾಕಲು ಒಟ್ಟು 2148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು. ಜಿಲ್ಲೆಯಲ್ಲಿ ಗ್ರಾಮೀಣ, ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ರಾಜಣ್ಣ, ಬಯಪಾ ಅಧ್ಯಕ್ಷ ವಿ. ಶಾಂತಕುಮಾರ್, ನಿರ್ದೇಶಕ ಪ್ರಸನ್ನಕುಮಾರ್, ಪುರಸಭೆ ಅಧ್ಯಕ್ಷ ಡಿ.ಎಂ ಮುನಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಸೀಮಾ ರುದ್ರಪ್ಪ ಮಾಬಳೆ, ತಹಶೀಲ್ದಾರ್ ಅನಿಲ್, ಕೆಪಿಸಿಸಿ ಸದಸ್ಯ ಚಿನ್ನಪ್ಪ ಸೇರಿದಂತೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
21ಕೆಡಿಬಿಪಿ1-ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ರಾಜಣ್ಣ, ಬಯಪಾ ಅಧ್ಯಕ್ಷ ಶಾಂತಕುಮಾರ್, ನಿರ್ದೇಶಕ ಪ್ರಸನ್ನಕುಮಾಮರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಇತರರಿದ್ದರು.