ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಿ

KannadaprabhaNewsNetwork |  
Published : Jan 12, 2025, 11:45 PM IST
೧೨ಕೆಎಲ್‌ಆರ್-೬ಕೋಲಾರದ ದೋಬಿ ಘಾಟ್‌ನಲ್ಲಿ ಜಿಲ್ಲಾ ಮಡಿವಾಳರ ಸಂಘದಿಂದ ಪದಾಧಿಕಾರಿಗಳ ಪುನರಾಯ್ಕೆ, ಸಂಘಟನೆ, ಮಡಿವಾಳ ಮಾಚಿದೇವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಕೆ.ಎಂ.ಮಂಜುನಾಥ್ ಮಾತನಾಡಿದರು. | Kannada Prabha

ಸಾರಾಂಶ

ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಡಿವಾಳ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಮೊದಲು ಜನಾಂಗದ ಮಕ್ಕಳು ಸುಶಿಕ್ಷಿತರಾಗಬೇಕು. ಈ ನಿಟ್ಟಿನಲ್ಲಿ ಸಮಾಜದಲ್ಲಿನ ಆರ್ಥಿಕ ಸ್ಥಿತಿವಂತರು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡಬೇಕು. ಪೋಷಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಬಾರದು,

ಕನ್ನಡಪ್ರಭ ವಾರ್ತೆ ಕೋಲಾರಮಡಿವಾಳ ಸಮಾಜದ ಸಂಘಟನೆ ಇತ್ತೀಚೆಗೆ ಬಲಗೊಳ್ಳುತ್ತಿದೆ, ಸಮುದಾಯದವು ಸಂಘಟಿತರಾದರೆ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಕೆ.ಎಂ.ಮಂಜುನಾಥ್ ಕರೆ ನೀಡಿದರು.ನಗರದ ದೋಬಿ ಘಾಟ್‌ನಲ್ಲಿ ಜಿಲ್ಲಾ ಮಡಿವಾಳರ ಸಂಘದಿಂದ ಪದಾಧಿಕಾರಿಗಳ ಪುನರಾಯ್ಕೆ, ಸಂಘಟನೆ ಹಾಗೂ ಮಡಿವಾಳ ಮಾಚಿದೇವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಶಿಕ್ಷಣಕ್ಕೆ ನೆರವು ನೀಡಿ

ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಡಿವಾಳ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಮೊದಲು ಜನಾಂಗದ ಮಕ್ಕಳು ಸುಶಿಕ್ಷಿತರಾಗಬೇಕು. ಈ ನಿಟ್ಟಿನಲ್ಲಿ ಸಮಾಜದಲ್ಲಿನ ಆರ್ಥಿಕ ಸ್ಥಿತಿವಂತರು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡಬೇಕು. ಫೆ.೧ರಂದು ಮಡಿವಾಳ ಮಾಚಿದೇವರ ಜಯಂತಿ ಆಚರಿಸಲು ತೀರ್ಮಾನಿಸಿದೆ, ಜಿಲ್ಲೆಯ ಮಡಿವಾಳ ಸಮುದಾಯ, ಮಾಚಿದೇವರ ಅನುಯಾಯಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮಾಚಿದೇವರ ಪಲ್ಲಕ್ಕಿ ಉತ್ಸವದ ಮೂಲಕ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿ ಹಳ್ಳಿಗಳಿಂದಲೂ ಪಲ್ಲಕ್ಕಿಗಳನ್ನು ತರಬೇಕು, ಯುವಕರು ಒಗ್ಗಟ್ಟಾಗಿ ಜಯಂತಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಮಕ್ಕಳಿಗೆ ಶಿಕ್ಷಣ ನೀಡಿ

ಜಿಲ್ಲಾ ಮಡಿವಾಳ ಸಂಘದ ಗೌರವಾಧ್ಯಕ್ಷ ರಂಗನಾಥ್ ಮಾತನಾಡಿ, ಮಡಿವಾಳ ಸಮುದಾಯವು ತೀರಾ ಹಿಂದುಳಿದಿದೆ, ಯಾವುದೇ ಸಮುದಾಯದವರು ಶೈಕ್ಷಣಿಕವಾಗಿ ಪ್ರಗತಿ ಹೊಂದಿದಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಬಹುದು, ಪೋಷಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಬಾರದು, ಕಲಿಕೆಗೆ ಕೊನೆಯಿಲ್ಲ, ಮಕ್ಕಳಿಗೆ ಆಸಕ್ತಿ ಇರುವವರೆಗೂ ಶಿಕ್ಷಣ ಕೊಡಿಸಬೇಕು ಎಂದು ತಿಳಿಸಿದರು.ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷರಾದ ಲಕ್ಷ್ಮಣ, ಗೋಪಾಲ್, ಪ್ರಧಾನ ಕಾರ್ಯದರ್ಶಿ ರಂಗನಾಥ್, ಮಹಿಳಾ ಗೌರವಾಧ್ಯಕ್ಷೆ ಅಮರಾವತಿ, ಹಿರಿಯ ಮುಖಂಡ ಶ್ರೀನಿವಾಸಪುರ ರಾಮಚಂದ್ರ, ಮಡಿವಾಳ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಸಂತೋಷ್‌, ಸುಜೀತ್, ಶ್ರೀನಿವಾಸ್, ವೇಣು, ನಾಗರಾಜು, ಅಮರನಾಥ್ ಇದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌