ರಾಮೇನಹಳ್ಳಿ ಓಂಕಾರೇಶ್ವರ ರಥ ನಿರ್ಮಾಣಕ್ಕೆ ಶಾಸಕರ ನೆರವಿನ ಹಸ್ತ

KannadaprabhaNewsNetwork |  
Published : Nov 13, 2026, 01:15 AM IST
58 | Kannada Prabha

ಸಾರಾಂಶ

ರಾಮೇನಹಳ್ಳಿ ಗ್ರಾಮದ ಶ್ರೀ ಓಂಕಾರೇಶ್ವರ ಸ್ವಾಮಿ ದೇವಾಲಯವು ಗ್ರಾಮಸ್ಥರ ಧಾರ್ಮಿಕ ನಂಬಿಕೆ ಹಾಗೂ ಭಕ್ತಿಯ ಕೇಂದ್ರವಾಗಿದೆ. ಪ್ರತಿ ವರ್ಷ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಜಾತ್ರಾ ಮಹೋತ್ಸವ ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಭಕ್ತಿ ಸಮರ್ಪಿಸುತ್ತಾರೆ.

ಕನ್ನಡಪ್ರಭ ವಾರ್ತೆ ಹುಣಸೂರು

ತಾಲೂಕಿನ ರಾಮೇನಹಳ್ಳಿ ಗ್ರಾಮದ ಆರಾಧ್ಯದೈವ ಶ್ರೀ ಓಂಕಾರೇಶ್ವರ ಸ್ವಾಮಿ ರಥ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಗೌಡ 10 ಲಕ್ಷ ನೀಡುವ ಮೂಲಕ ಗ್ರಾಮದ ಭಕ್ತರ ಬಹುದಿನಗಳ ಆಶಯಕ್ಕೆ ಸ್ಪಂದಿಸಿದ್ದಾರೆ ಎಂದು ಶಾಸಕರ ಪತ್ನಿ ವರ್ಷ ಹರೀಶ್ ಗೌಡ ತಿಳಿಸಿದರು.

ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಹಿರಿಯರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಗ್ರಾಮದ ದೇವರ ರಥದ ಕಾರ್ಯ ಅರ್ಧಕ್ಕೆ ನಿಂತಿದೆ ಎಂದು ಗ್ರಾಮಸ್ಥರು ಹೇಳಿದಾಗ ಉಳಿದ ಕೆಲಸ ಮತ್ತು ರಥದ ಪೂರ್ಣ ಕೆಲಸವನ್ನು ಮಾಡಲು ತಿಳಿಸುವುದಾಗಿ ಹೇಳಿದರು.

ರಾಮೇನಹಳ್ಳಿ ಗ್ರಾಮದ ಶ್ರೀ ಓಂಕಾರೇಶ್ವರ ಸ್ವಾಮಿ ದೇವಾಲಯವು ಗ್ರಾಮಸ್ಥರ ಧಾರ್ಮಿಕ ನಂಬಿಕೆ ಹಾಗೂ ಭಕ್ತಿಯ ಕೇಂದ್ರವಾಗಿದೆ. ಪ್ರತಿ ವರ್ಷ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಜಾತ್ರಾ ಮಹೋತ್ಸವ ರಥೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಭಕ್ತಿ ಸಮರ್ಪಿಸುತ್ತಾರೆ.

ಇಂತಹ ಧಾರ್ಮಿಕ ಪರಂಪರೆಯ ಪ್ರಮುಖ ಆಕರ್ಷಣೆಯಾಗಿರುವ ರಥವು ಹೊಸದಾಗಿ ನಿರ್ಮಾಣವಾಗಬೇಕೆಂಬುದು ಗ್ರಾಮಸ್ಥರು ಹಾಗೂ ಭಕ್ತಾದಿಗಳ ಬಹುದಿನಗಳ ಕನಸಾಗಿತ್ತು.

ಈ ಹಿನ್ನೆಲೆ ರಥ ನಿರ್ಮಾಣಕ್ಕೆ ನೆರವು ನೀಡುವಂತೆ ಗ್ರಾಮಸ್ಥರು ಶಾಸಕ ಹರೀಶ್ ಗೌಡ ಅವರ ಗಮನಕ್ಕೆ ತಂದಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ರಥ ನಿರ್ಮಾಣ ಕಾರ್ಯಕ್ಕೆ ಸಹಾಯ ನೀಡಲು ಮುಂದಾಗಿರುವುದು ಭಕ್ತ ಸಮುದಾಯದಲ್ಲಿ ಸಂತಸ ಮೂಡಿಸಿದೆ.

ದೇವಾಲಯಗಳ ಅಭಿವೃದ್ಧಿ ಕೇವಲ ಕಟ್ಟಡಗಳ ನಿರ್ಮಾಣಕ್ಕೆ ಸೀಮಿತವಾಗದೆ, ನಮ್ಮ ಪೂರ್ವಜರು ಆಚರಿಸಿಕೊಂಡು ಬಂದಿರುವ ಧಾರ್ಮಿಕ ಸಂಪ್ರದಾಯ, ಸಂಸ್ಕೃತಿ ಹಾಗೂ ಗ್ರಾಮೀಣ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ರಾಮೇನಹಳ್ಳಿಯ ಓಂಕಾರೇಶ್ವರ ಸ್ವಾಮಿ ರಥ ನಿರ್ಮಾಣಕ್ಕೆ ಶಾಸಕರು ನೀಡಿರುವ ಸಹಕಾರ ಮಹತ್ವ ಪಡೆದುಕೊಂಡಿದೆ.

ರಥ ನಿರ್ಮಾಣ ಕಾರ್ಯ ಪೂರ್ಣಗೊಂಡು ಮುಂಬರುವ ರಥೋತ್ಸವದ ಸಂದರ್ಭದಲ್ಲಿ ನೂತನ ರಥದಲ್ಲಿ ಶ್ರೀ ಓಂಕಾರೇಶ್ವರ ಸ್ವಾಮಿಯ ಉತ್ಸವ ವಿಜೃಂಭಣೆಯಿಂದ ನಡೆಯಬೇಕು ಎಂಬುದು ಗ್ರಾಮಸ್ಥರ ಆಶಯವಾಗಿದೆ. ಶಾಸಕ ಹರೀಶ್ ಗೌಡ ಅವರ ಸಹಕಾರಕ್ಕೆ ರಾಮೇನಹಳ್ಳಿ ಗ್ರಾಮದ ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ರಥ ನಿರ್ಮಾಣ ಕಾರ್ಯಕ್ಕೆ ಸಾರ್ವಜನಿಕರು ಕೂಡ ಕೈಜೋಡಿಸಿ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಿದ್ದಾರೆ.

ಓಂಕಾರೇಶ್ವರ ಸಮಿತಿ ಅದ್ಯಕ್ಷ ಸಿದ್ದಲಿಂಗೇಗೌಡ, ತಾಪಂ ಮಾಜಿ ಸದಸ್ಯ ವೆಂಕಟೇಶ್, ಪಾಪು, ವೀರಭದ್ರಚಾರ್, ಕೃಷ್ಣೇಗೌಡ, ರಾಮಚಂದ್ರೇಗೌಡ, ಶಿವಾನಂದ್, ರೖತ ಸಂಘದ ಬೆಟ್ಟೇಗೌಡ, ರಾಜೇಶ್, ಕೃಷ್ಣೇಗೌಡ ಮತ್ತು ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌