ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಲಿದೆ. ಜನಸ್ಪಂದನದಲ್ಲಿ ಸ್ವೀಕರಿಸಿದ ದೂರು, ಅಹವಾಲುಗಳನ್ನು ಶೀಘ್ರವಾಗಿ ಸಂಬಂಧಪಟ್ಟ ಇಲಾಖೆಗಳು ಬಗೆಹರಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಸರ್ಕಾರಿ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು. ರೈತರ ಪರವಾಗಿ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕಿದೆ. ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸ್ಮಶಾನ ಜಾಗಗಳ ಗುರುತಿಸುವಿಕೆಗೆ ಕ್ರಮ ವಹಿಸಬೇಕಿದೆ. ಕೆರೆ ಸಂರಕ್ಷಣೆ, ಅಕ್ರಮ ಭೂ ಕಬಳಿಕೆ, ಗೋಮಾಳ ಒತ್ತುವರಿಯಂತಹ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅದೇ ರೀತಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಲು ಹೇಳಿದರು.
ಮುಖ್ಯಮಂತ್ರಿಗಳ ಆಶಯದಂತೆ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರವೇ ಜನರ ಬಳಿ ಬಂದು ಸಮಸ್ಯೆ ಬಗೆಹರಿಸುವ ಕೆಲಸ ಇದಾಗಿದೆ. ಸ್ವೀಕೃತವಾದ ಅರ್ಜಿಗಳನ್ನು ಸಕಾಲದಲ್ಲಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕಿದೆ. ಇದರಿಂದಾಗಿ ಜನರ ಸಮಸ್ಯೆ ಶೀಘ್ರ ಬಗೆಹರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಮರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.126 ಅರ್ಜಿ ಸ್ವೀಕಾರ:
ಕಾರ್ಯಕ್ರಮದಲ್ಲಿ ಹೊನ್ನಾವರ ಗ್ರಾಪಂ ಅಧ್ಯಕ್ಷ ತಿರುಮಲಮ್ಮ, ಎಎಸ್ಪಿ ಲಕ್ಷ್ಮಣ್, ದೊಡ್ಡಬಳ್ಳಾಪುರ ಎಸಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಪಂ ಇಒ ಮುನಿರಾಜು, ಡಿವೈಎಸ್ಪಿ ರವಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಯ ಮುಖಂಡರು, ಪಂಚಾಯಿತಿ ಅಧಿಕಾರಿಗಳು, ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸಾರ್ವಜನಿಕರು ಉಪಸ್ಥಿತರಿದ್ದರು.
19ಕೆಡಿಬಿಪಿ2-ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.