ಬಡ ಮಕ್ಕಳ ವಿದ್ಯೆಗೆ ನೆರವಾಗುವುದು ಪುಣ್ಯದ ಕೆಲಸ: ಸೂಲಿಕುಂಟೆ ಆನಂದ್

KannadaprabhaNewsNetwork |  
Published : Jul 12, 2024, 01:31 AM IST
11ಕೆಬಿಪಿಟಿ.1.ಬಂಗಾರಪೇಟೆ ಪಟ್ಟಣದಲ್ಲಿ ದಲಿತ ಸಮಾಜ ಸೇನೆಯಿಂದ ಬಡಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಪ್ರತಿ ವರ್ಷ ಸಂಘಟನೆಯಿಂದ ಬಡ ಮಕ್ಕಳ ಶೈಕ್ಷಣಿಕ ಉನ್ನತಿಗೆ ಪೂರಕವಾಗಿ ನೆರವನ್ನು ನೀಡುತ್ತಿದೆ, ಈ ವರ್ಷ ಸಹ ಪಟ್ಟಣದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಬಡ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ನೋಟ್ ಬುಕ್ ಖರೀದಿ ಮಾಡಲೂ ಶಕ್ತಿಯಿರುವುದಿಲ್ಲ, ಈ ಕಾರಣಕ್ಕೆ ಶಾಲೆಯಿಂದ ಹೊರಗುಳಿಯುವರು, ಇಂತಹ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ಪೂರೈಸಿ ವಿದ್ಯಾಭ್ಯಾಸಕ್ಕೆ ಪೋತ್ಸಾಹ ನೀಡಿದರೆ ಮುಂದೆ ಸಮಾಜದ ಆಸ್ತಿಯಾಗಿ ಹೊರಹೊಮ್ಮುವರು.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಅನೇಕ ಗ್ರಾಮೀಣ ಮಕ್ಕಳಲ್ಲಿ ಓದುವ ಹಂಬಲವಿದ್ದರೂ ಅನುಕೂಲಗಳ ಕೊರತೆಯಿಂದ ವಿದ್ಯೆಯಿಂದ ಹಿಂದೆ ಸರಿಯುವಂತಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ದಲಿತ ಸಮಾಜ ಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಹೇಳಿದರು.

ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಪಟ್ಟಣದ ಸರಸ್ವತಿ ವಿದ್ಯಾನಿಕೇತನ ಕನ್ನಡ ಅನುದಾನಿತ ಶಾಲಾ ಮಕ್ಕಳಿಗೆ ಸಂಘಟನೆ ವತಿಯಿಂದ ನೋಟ್ ಬುಕ್ ಗಳನ್ನು ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಓದುವ ಹಂಬಲವನ್ನು ಅನೇಕ ಮಕ್ಕಳು ಹೊಂದಿರುತ್ತಾರೆ. ಆದರೆ ಮನೆಯಲ್ಲಿನ ವಾತಾವರಣ ಹಾಗೂ ಸೌಲಭ್ಯಗಳ ಕೊರತೆಯಿಂದ ವಿದ್ಯೆಯಿಂದ ವಂಚಿತರಾಗಿದ್ದಾರೆ, ಅಂತಹ ಪ್ರತಿಭಾವಂತ ಮಕ್ಕಳನ್ನು ಪ್ರತಿಯೊಬ್ಬರೂ ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಅಭಿಪ್ರಾಯಪಟ್ಟರು.ದಲಿತ ಸಮಾಜ ಸೇನೆ ಎಂದರೆ ಬರೀ ಹೋರಾಟಗಳನ್ನು ಮಾಡುವುದಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸಮಾಜದ ಒಳತಿಗಾಗಿಯೂ ಹಾಗೂ ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿದೆ ಎಂದರು.

ಪ್ರತಿ ವರ್ಷ ಸಂಘಟನೆಯಿಂದ ಬಡ ಮಕ್ಕಳ ಶೈಕ್ಷಣಿಕ ಉನ್ನತಿಗೆ ಪೂರಕವಾಗಿ ನೆರವನ್ನು ನೀಡುತ್ತಿದೆ, ಈ ವರ್ಷ ಸಹ ಪಟ್ಟಣದ ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಬಡ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ನೋಟ್ ಬುಕ್ ಖರೀದಿ ಮಾಡಲೂ ಶಕ್ತಿಯಿರುವುದಿಲ್ಲ, ಈ ಕಾರಣಕ್ಕೆ ಶಾಲೆಯಿಂದ ಹೊರಗುಳಿಯುವರು, ಇಂತಹ ಮಕ್ಕಳಿಗೆ ಲೇಖನಿ ಸಾಮಗ್ರಿಗಳನ್ನು ಪೂರೈಸಿ ವಿದ್ಯಾಭ್ಯಾಸಕ್ಕೆ ಪೋತ್ಸಾಹ ನೀಡಿದರೆ ಮುಂದೆ ಸಮಾಜದ ಆಸ್ತಿಯಾಗಿ ಹೊರಹೊಮ್ಮುವರು, ಆದ್ದರಿಂದ ಉಳ್ಳವರು ಪ್ರತಿಯೊಬ್ಬರೂ ಬಡ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ನೆರವು ನೀಡಿ, ನವ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಬೇಕೆಂದು ಹೇಳಿದರು.

ಶಾಲೆಯ ಮುಖ್ಯಶಿಕ್ಷಕ ಆರ್.ಅಶ್ವಥ್, ಮಂಜುನಾಥ್, ಸಂಘದ ರಾಜ್ಯ ಕಾರ್ಯದರ್ಶಿ ಅಂಬರೀಶ್, ಜಿಲ್ಲಾಧ್ಯಕ್ಷ ಗೌತಮ್, ಕಾರ್ಯದರ್ಶಿ ಅರ್ಜುನ್, ತಾಲೂಕು ಅಧ್ಯಕ್ಷ ನಾಗೇಶ್, ಗೋವಿಂದ, ಜಾನಿ, ಶ್ರೀಕಾಂತ್, ಆಟೋ ಕರ್ಣ ಇತರರು ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ