ಬಿಕ್ಕೋಡು ಗ್ರಾಪಂ ಅಧ್ಯಕ್ಷರಾಗಿ ಹೇಮಚಂದ್ರ ಆಯ್ಕೆ

KannadaprabhaNewsNetwork |  
Published : Jul 08, 2024, 12:42 AM IST
7ಎಚ್ಎಸ್ಎನ್8 :  | Kannada Prabha

ಸಾರಾಂಶ

ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಹೇಮಚಂದ್ರ ಆಯ್ಕೆಯಾಗಿದ್ದಾರೆ. ಎನ್‌ ಎಸ್ ಮೋಹನ್ ರಾಜ್‌ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿಯ ಎಲ್ಲಾ ಸದಸ್ಯರುಗಳ ಬೆಂಬಲದೊಂದಿಗೆ ಒಬ್ಬರೆ ನಾಮಪತ್ರ ಸಲ್ಲಿಕೆ ಮಾಡಿದ್ದ ಹೇಮಚಂದ್ರರವರನ್ನು ಚುನಾವಣಾಧಿಕಾರಿ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ರವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಬಿಕ್ಕೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಹೇಮಚಂದ್ರ ಅವಿರೋಧವಾಗಿ ಆಯ್ಕೆಯಾದರು.

12 ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಎನ್‌ ಎಸ್ ಮೋಹನ್ ರಾಜ್‌ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿಯ ಎಲ್ಲಾ ಸದಸ್ಯರುಗಳ ಬೆಂಬಲದೊಂದಿಗೆ ಒಬ್ಬರೆ ನಾಮಪತ್ರ ಸಲ್ಲಿಕೆ ಮಾಡಿದ್ದ ಹೇಮಚಂದ್ರರವರನ್ನು ಚುನಾವಣಾಧಿಕಾರಿ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ರವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹೇಮಚಂದ್ರ ಮಾತನಾಡಿ, ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಧನ್ಯವಾದ. ತಿಳಿಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸ್ವಚ್ಛತೆ, ಆರೋಗ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಮ್ಮ ಮೂಲಗುರಿಯಾಗಿದೆ. ನೆನೆಗುದಿಗೆ ಬಿದ್ದಿರುವ ಘನತ್ಯಾಜ್ಯ ವಿಲೇವಾರಿ ಘಟಕ , ಹೈಟೆಕ್ ಮಾದರಿಯ ಸಂತೆ ಮಾರುಕಟ್ಟೆ ಅಭಿವೃದ್ಧಿ, ವಿದ್ಯುತ್ ಉಪ ಕೇಂದ್ರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಸುಧಾ ಸದಸ್ಯರಾದ ರಾಜಶೇಖರ್ , ತೇಜು ಕುಮಾರ್ ಮೋಹನ್ ರಾಜ್, ವೇದಾವತಿ , ರಾಧಾ, ಶೋಭಾ, ಶಶಿಕಲಾ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಶಿವಶಂಕರ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆ ಸಿ ಮೋಹನ್ ಕುಮಾರ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಭಾನುಪ್ರಕಾಶ್, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಾದ ಎಸ್ ಹೆಚ್ ಗಣೇಶ್, ದೊಡ್ಡಪ್ಪ, ಬಸವರಾಜು, ನಟರಾಜು, ಪರ್ವತಯ್ಯ, ಶಂಕರಯ್ಯ, ರತನ್ ಕುಮಾರ್, ಚಂದ್ರ ಶೆಟ್ಟಿ, ಮುಮ್ತಾಜ್, ಪಿಡಿಒ ತಾರಾನಾಥ್ ನಾಯಕ್ ಇತರರು ಇದ್ದರು.

PREV

Recommended Stories

ನ.14ರಿಂದ 20ರಿಂದ ರಾಜ್ಯದಲ್ಲಿ ಸಹಕಾರ ಸಪ್ತಾಹ
ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ