ಕನ್ನಡಪ್ರಭ ವಾರ್ತೆ ಕೊಟ್ಟೂರು
ಶನಿವಾರ ಇಲ್ಲಿನ ತಾಲೂಕು ಕಾರ್ಯಾಲಯದ ಮಹಾತ್ಮಾ ಗಾಂಧೀಜಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದಲ್ಲಿನ ಎಲ್ಲಾ ಬಗೆಯ ತೊಂದರೆ ನಿವಾರಿಸಿ ತಪ್ಪುಗಳನ್ನು ಮನ್ನಿಸುವ ಭಾವ ಮೈಗೊಂಡಿಸಿಕೊಂಡು ಕ್ಷೇಮ ಗುಣವನ್ನು ಹೊಂದುವ ಮೂಲಕ ಮಾದರಿಯಾಗಬೇಕು ಎಂಬುದನ್ನು ಸಮಾಜಕ್ಕೆ ತೋರಿಸಿಕೊಟ್ಟರು ಎಂದರು.ತಾಲೂಕು ರೆಡ್ಡಿ ಸಮಾಜದ ಅಧ್ಯಕ್ಷ ಕೆ. ಭರಮರೆಡ್ಡಿ ಮಾತನಾಡಿದರು.
ಹೂವಿನಹಡಗಲಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ:
ಇಲ್ಲಿನ ತಾಲೂಕು ಕಚೇರಿಯಲ್ಲಿ ತಾಲೂಕಾಡಳಿತದಿಂದ ಶಿವಶರಣಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.ಹೇಮರೆಡ್ಡಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಮಾತನಾಡಿದ ತಹಸೀಲ್ದಾರ್ ಜಿ.ಸಂತೋಷಕುಮಾರ್, ಶಿವಶರಣಿ ಹೇಮರೆಡ್ಡಿ ಮಲ್ಲಮ್ಮ ಶ್ರೀಶೈಲ ಮಲ್ಲಿಕಾರ್ಜುನನ ಅನುಗ್ರಹಕ್ಕೆ ಪಾತ್ರವಾಗಿದ್ದಾಳೆ. ಇಡೀ ರೆಡ್ಡಿ ಕುಲ ಧರ್ಮ ಉದ್ಧಾರ ಮಾಡಲು ಅವತರಿಸಿದ ಶಿವಶರಣಿಯಾಗಿದ್ದಾಳೆ. ರೆಡ್ಡಿ ಸಮಾಜಕ್ಕೆ ಮಾತ್ರ ಸೀಮಿತವಾಗಿಲ್ಲ, ಇವರ ಜೀವನದ ಮೌಲ್ಯ ತತ್ವ ಆದರ್ಶ ಎಲ್ಲರೂ ಪಾಲಿಸಬೇಕಿದೆ ಎಂದರು.ಈ ಸಂದರ್ಭದಲ್ಲಿ ವರಕನಹಳ್ಳಿ ಕೊಟ್ರೇಶ, ಚಿದಾನಂದರೆಡ್ಡಿ, ದ್ವಾರಕೀಶರೆಡ್ಡಿ ಸೇರಿದಂತೆ ರೆಡ್ಡಿ ಸಮಾಜದ ಮುಖಂಡರು ಮತ್ತು ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.