ಮೇ 10ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ

KannadaprabhaNewsNetwork |  
Published : May 01, 2026, 01:15 AM IST
ಚಿತ್ರದುರ್ಗ  ಎರಡನೇ ಪುಟದ  ಮಿಡ್ಲ್  | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಪೂರ್ವ ಸಿದ್ದತಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮಾತನಾಡಿದರು.

ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲಾ ಕೇಂದ್ರದಲ್ಲಿ ಮೇ 10ರಂದು ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ ನಡೆಯಲಿದೆ ಎಂದು ಹೇಳಿದರು.

ಹೇಮರೆಡ್ಡಿ ಮಲ್ಲಮ್ಮ ಸಮಾಜ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ಮಾತನಾಡಿ, ಸಮಾಜದ ವತಿಯಿಂದಲೂ ಮೇ 25ರಂದು ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಯಂತಿ ಅಂಗವಾಗಿ ಅದ್ಧೂರಿ ಮೆರವಣಿಗೆ, ಸಮಾಜದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮಾಜದ ಸಾಧಕರಿಗೆ ಸನ್ಮಾನ ಮಾಡಲಾಗುವುದು. ಸಮಾಜದ ವತಿಯಿಂದ ನಡೆಯುವ ಜಯಂತಿ ಕಾರ್ಯಕ್ರಮಕ್ಕೂ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದಸ್ವಾಮಿ, ನಗರಸಭೆಯ ಪುಟ್ಟಪ್ಪ, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ.ಎಲ್.ಪಾಲಾಕ್ಷಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್, ಮುಖಂಡರಾದ ಮಲ್ಲಿಕಾರ್ಜುನ, ರವಿಂದ್ರನಾಥ, ನಾಗಭೂಷಣ, ಶಶಿಧರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಕ್ಕಿನಾಳು ಗ್ರಾಮದಲ್ಲಿ ಬಿರುಗಾಳಿಗೆ ಬಾಳೆತೋಟ ನಾಶ
ಕೋಗೋಡು ಬಳಿ ಕಾಡಾನೆಗಳ ಸಂಚಾರ