10ಕ್ಕೆ ಸರಳವಾಗಿ ಹೇಮರೆಡ್ಡಿಮಲ್ಲಮ್ಮ ಜಯಂತಿ ಆಚರಣೆ

KannadaprabhaNewsNetwork |  
Published : May 04, 2025, 01:37 AM IST
ಫೋಟೋ 3hsd2:ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ  ಅಧ್ಯಕ್ಷತೆ ವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಚಿತ್ರದುರ್ಗ: ಸರ್ಕಾರದ ನಿರ್ದೇಶನದಂತೆ ಮೇ 10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗ: ಸರ್ಕಾರದ ನಿರ್ದೇಶನದಂತೆ ಮೇ 10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ಈ ಕುರಿತು ಶನಿವಾರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮಾಜದ ಮುಖಂಡರು ಮೇ.10 ನಂತರ ಸಮಾಜದ ವತಿಯಿಂದ ಅದ್ಧೂರಿಯಾಗಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಆಚರಣೆ ಮಾಡುವುದಾಗಿ ತಿಳಿಸಿದ್ದೀರಿ. ಆದರೆ ಸರ್ಕಾರ ಮೇ.10 ರಂದು ಜಯಂತಿ ಆಚರಣೆಗೆ ದಿನಾಂಕ ನಿಗದಿ ಪಡಿಸಿದ ಕಾರಣ ಅಂದು ಸರಳವಾಗಿ ಜಯಂತಿ ಆಚರಿಸಿ, ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು. ಸಮಾಜದಿಂದ ಆಚರಿಸುವ ಜಯಂತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಳಿಕೆ ಅನುದಾನದ ಸಹಾಯ ಹಾಗೂ ಕಲಾತಂಡಗಳನ್ನು ಒದಗಿಸುವುದಾಗಿ ಅವರು ಹೇಳಿದರು.ಮೇ.20ರ ಒಳಗಾಗಿ ಸಮಾಜದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಗುವುದು. ಈ ವೇಳೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಚಿದಾನಂದಪ್ಪ ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್, ಹೇಮರೆಡ್ಡಿ ಮಲ್ಲಮ್ಮ ಸಮಾಜದ ಕಾರ್ಯದರ್ಶಿ ಶಿವಾನಂದಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್, ಮುಖಂಡರಾದ ಚಂದ್ರಶೇಖರ್, ಮಹೇಶ್, ಶಶಿಧರ್, ಇಂದ್ರಣ್ಣ.ಎಸ್.ಟಿ, ಕೆ.ಎನ್.ವೀರಭದ್ರಪ್ಪ, ಮಹಾಂತೇಶ್, ಎಂ.ಪಿ.ಮಲ್ಲಿಕಾರ್ಜುನ ರೆಡ್ಡಿ, ನಾಗರಾಜ.ಕೆ.ಎಂ, ಜಿ.ಆರ್.ಮಹಾಂತೇಶಪ್ಪ, ಟಿ.ಚನ್ನಯ್ಯರೆಡ್ಡಿ, ಜಿಲ್ಲಾ ವೇಮನ ಸಮಾಜದ ಮುಖಂಡರು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆಯಿಂದ ಆಹಾರ ಮೇಳ, ವಸ್ತು ಪ್ರದರ್ಶನ
ಚಲುವರಾಯಸ್ವಾಮಿ ಅವರಿಂದಲೇ ಹಿಟ್ ಆಂಡ್ ರನ್ ಕೆಲಸ: ಸಿ.ಎಸ್.ಪುಟ್ಟರಾಜು