ಕನ್ನಡಪ್ರಭ ವಾರ್ತೆ ಬೇಲೂರು
ಮಹಿಳಾ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ನೂತನ ನಿರ್ದೇಶಕಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ಇನ್ನಷ್ಟು ಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಬಿಬಿ ಶಿವರಾಜ್, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಬಿಎಸ್ ಆರಾಧ್ಯ. ಹೊಯ್ಸಳ ವಿದ್ಯುತ್ ಉಪಕರಣಗಳ ರಿಪೇರಿದಾರರ ಕಾರ್ಮಿಕ ಸಂಘದ ಅಧ್ಯಕ್ಷ ಕೇಬಲ್ ವಿಜಯ್ ಕುಮಾರ ಸೇರಿದಂತೆ ಇತರ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.