ಕೆ.ಆರ್.ಪೇಟೆ: ಹೇಮಾವತಿ ಜಲಾಶಯದಿಂದ ನದಿ ಮತ್ತು ಯೋಜನಾ ವ್ಯಾಪ್ತಿಗೆ ಬರುವ ಎಲ್ಲಾ ನಾಲೆಗಳಿಂದ ಜನ ಜಾನುವಾರುಗಳಿಗೆ, ಕುಡಿಯುವ ನೀರಿಗಾಗಿ ಕೆರೆಕಟ್ಟೆಗಳನ್ನು ತುಂಬಿಸಲು ಮಾತ್ರ 8 ದಿನಗಳ ಕಾಲ ನೀರು ಬಿಡುಗಡೆ ಮಾಡಲಾಗುವುದು ಎಂದು ಗೊರೂರು ಜಲಾಶಯದ ಸೂಪರಿಂಡೆಂಟ್ ಎಂಜಿನಿಯರ್ ತಿಳಿಸಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ಟೋಬರ್ 20ರಿಂದ ಅನ್ವಯವಾಗುವಂತೆ ಹೇಮಾವತಿ ಯೋಜನಾವಲಯದ ಎಡ ಮತ್ತು ಬಲದಂಡಾ ನಾಲೆಗಳಿಗೆ ಅ.23ರಿಂದ ಅನ್ವಯವಾಗುವಂತೆ ಹೇಮಾವತಿ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಕುಡಿಯುವ ಹಾಗೂ ಕೆರೆಕಟ್ಟೆಗಳನ್ನು ತುಂಬಿಸುವ ಉದ್ದೇಶಕ್ಕೆ ಮಾತ್ರ ನೀರು ಬಿಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನೀರನ್ನು ನಂಬಿ ದೀರ್ಘಕಾಲಿಕ ಬೆಳೆಗಳನ್ನು ಬೆಳೆದರೆ ಆಗುವ ನಷ್ಟಕ್ಕೆ ರೈತರುಗಳೇ ಹೊಣೆಯಾಗಬೇಕಾಗುತ್ತದೆ ಎಂದು ಮನವಿ ಮಾಡಿದ್ದಾರೆ.