ಕನ್ನಡಪ್ರಭ ವಾರ್ತೆ ಕುಂದಾಪುರ
ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪಪೂ) ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪ್ರಾಂಶುಪಾಲರ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರ ಮತ್ತು 2025-26ನೇ ಶೈಕ್ಷಣಿಕ ವರ್ಷದ ಕಾಲೇಜು ವಿಭಾಗದ ಕ್ರೀಡಾ ಚಟವಟಿಕೆಗಳ ಕುರಿತಾಗಿ ಸಭೆ ಹಾಗೂ ಕ್ರೀಡಾ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಜನತಾ ಪದವಿ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಪ್ರಮುಖವಾದ್ದು. ಈ ಶೈಕ್ಷಣಿಕ ವರ್ಷದ ಎಲ್ಲ ಕ್ರೀಡಾ ಚಟುವಟಿಕೆಗಳನ್ನು ಸಮರ್ಪಕವಾಗಿ ಆಯೋಜಿಸುವುದರ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆ ಗುರುತಿಸುವಂತಾಗಬೇಕು ಎಂದು ಆಶಿಸಿದರು.ಅಧ್ಯಕ್ಷತೆ ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಮಾತನಾಡಿ, ವಿದ್ಯಾರ್ಥಿಗಳ ಕಲಿಕೆ ನಾಲ್ಕು ಗೋಡೆಯೊಳಗಷ್ಟೆ ಸೀಮಿತವಾಗದೆ ಅದರಿಂದ ಆಚೆಗೆ ಬಂದಾಗ ಸರ್ವತೋಮುಖ ಬೆಳವಣಿಗೆ ಸಾಧ್ಯ. ಆದ್ದರಿಂದ ಕ್ರೀಡಾಚಟುವಟಿಕೆಗಳಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.ಕಾರ್ಯಕ್ರಮದದಲ್ಲಿ ಕಳೆದ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ 35 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘ ಅಧ್ಯಕ್ಷ ವರ್ಗೀಸ್, ಕಾರ್ಯದರ್ಶಿ ರವೀಂದ್ರ ಉಪಾಧ್ಯಾಯ, ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘ ಅಧ್ಯಕ್ಷ ದಯಾನಂದ ಪೈ, ಕಾರ್ಯದರ್ಶಿ ದಿನೇಶ ಕೊಡವೂರು, ಕ್ರೀಡಾ ಕಾರ್ಯದರ್ಶಿ ವಿಜಯ ರಾವ್, ಶಾಲಾ ಶಿಕ್ಷಣ ವಿಭಾಗದ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ಜಿಲ್ಲಾ ಪ್ರಾಂಶುಪಾಲರ ಸಂಘದ ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ, ಅಧ್ಯಕ್ಷ ಸತೀಶ್ ಹೆಗ್ಡೆ ಶಾನಾಡಿ, ಕಾರ್ಯದರ್ಶಿ ಸುಕೇಶ ಶೆಟ್ಟಿ ಹೊಸಮಠ, ಸಾಣೂರು ಸರ್ಕಾರಿ ಪದಪೂ ಕಾಲೇಜಿನ ಪ್ರಾಂಶುಪಾಲೆ ಸುಚೇತ ಉಪಸ್ಥಿತರಿದ್ದರು. ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು. ಉಮೇಶ ನಾಯ್ಕ ವಂದಿಸಿದರು.