ಪತಂಜಲಿ ಯೋಗ ಸಮಿತಿ ಹಾಗೂ ಇಲ್ಲಿನ ಸೇವಾ ಭಾರತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬಿಜ್ಜೂರು ಜಡಿಬೂಟಿ ದಿನ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಗೋಕರ್ಣ
ಪತಂಜಲಿ ಯೋಗ ಸಮಿತಿ ಹಾಗೂ ಇಲ್ಲಿನ ಸೇವಾ ಭಾರತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬಿಜ್ಜೂರು ಜಡಿಬೂಟಿ ದಿನ ಆಚರಿಸಲಾಯಿತು.
ಆ. ೪ರಂದು ಆಚಾರ್ಯ ಬಾಲಕೃಷ್ಣ ಅವರ ಜನ್ಮದಿನವಾಗಿದ್ದು, ಪತಂಜಲಿ ಯೋಗಪೀಠದ ಸಂಸ್ಥಾಪಕ ಯೋಗ ಗುರು ಬಾಬಾ ರಾಮದೇವ್ ಆಪ್ತ ಸಹವರ್ತಿ ಆಚಾರ್ಯ ಬಾಲಕೃಷ್ಣ ಭಾರತೀಯ ಔಷಧೀಯ ಸಸ್ಯಗಳ ಸಂರಕ್ಷಣೆ, ಅಧ್ಯಯನ ಮತ್ತು ಜನಪ್ರಿಯತೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜನ್ಮದಿನವನ್ನು ಜಡಿಬೂಟಿ ದಿನವನ್ನಾಗಿ ಆಚರಿಸುತ್ತಾ ಬಂದಿದ್ದು, ಇದರ ಪ್ರಯುಕ್ತ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು.
ಯೋಗ ಶಿಕ್ಷಕರಾದ ನಾಗೇಂದ್ರ ಭಟ್ ಮಾರ್ಗದರ್ಶನದಲ್ಲಿ ಪ್ರತಿದಿನ ಯೋಗಾಭ್ಯಾಸ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಾಯಿತು.
ಸೇವಾ ಭಾರತೀಯ ರಾಜೀವ್ ಬೈಲ್ಕೇರಿ ಔಷಧೀಯ ಸಸ್ಯಗಳ ಮಹತ್ವದ ಕುರಿತು ಮಾತನಾಡಿ, ನಮ್ಮ ಪೂರ್ವಜರು ಪ್ರಕೃತಿಯಲ್ಲಿರುವ ಸಸ್ಯಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಆರೋಗ್ಯ ಸಂರಕ್ಷಣೆಗೆ ಹೇಗೆ ಬಳಸುತ್ತಿದ್ದರು ಎಂಬುದನ್ನು ವಿವರಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಲಭ್ಯವಿರುವ ಸಾಂಪ್ರದಾಯಿಕ ಜ್ಞಾನವನ್ನು ಮುಂದಿನ ಪೀಳಿಗೆಗೆ ಉಳಿಸುವ ಅಗತ್ಯವನ್ನು ತಿಳಿಸಿದರು. ಶಿಬಿರದಲ್ಲಿ ೪೦ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಈ ಸಂದರ್ಭ ಶಿಬಿರದ ಎಲ್ಲಾ ಭಾಗವಹಿಸಿದವರಿಗೆ ಅರಣ್ಯ ಇಲಾಖೆಯವರು ಪ್ರಾಯೋಜಕತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಈ ಔಷಧೀಯ ಸಸ್ಯಗಳ. ಸಸ್ಯಗಳನ್ನು ಕೇವಲ ನೆಡುವುದಷ್ಟೇ ಅಲ್ಲದೆ, ಅವುಗಳ ಸಂರಕ್ಷಣೆ ಹಾಗೂ ನಮ್ಮ ಸುತ್ತಮುತ್ತಲಿನ ಸಸ್ಯಗಳ ಔಷಧೀಯ ಮಹತ್ವವನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶ ನೀಡಲಾಯಿತು. ಬಿಜ್ಜೂರಿನ ಪ್ರಕಾಶ್ ಗೌಡ ಕಾರ್ಯಕ್ರಮ ಸಂಘಟಿಸಿದರು. ಪತಂಜಲಿ ಯೋಗ ಸಮಿತಿ, ಸೇವಾ ಭಾರತಿ ಗೋಕರ್ಣ, ಕರ್ನಾಟಕ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಸಹಕಾರ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.