ಮತಾಂತರಿಗಳ ವಿರುದ್ಧ ಕ್ರಮಕ್ಕೆ ಹೇರೂರು ಗ್ರಾಮಸ್ಥರ ಆಗ್ರಹ

KannadaprabhaNewsNetwork |  
Published : May 20, 2026, 02:30 AM IST
ಚಿತ್ರ:  18ಎಂಡಿಕೆ1 : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹೇರೂರು ಗ್ರಾಮಸ್ಥರು.  | Kannada Prabha

ಸಾರಾಂಶ

ನಾಕೂರು ಶಿರಂಗಾಲ ಗ್ರಾಪಂ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಿರಂತರವಾಗಿ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇರೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.

ಮಡಿಕೇರಿ: ನಾಕೂರು ಶಿರಂಗಾಲ ಗ್ರಾಪಂ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಿರಂತರವಾಗಿ ಮತಾಂತರ ಪ್ರಕ್ರಿಯೆ ನಡೆಯುತ್ತಿದೆ. ಆದ್ದರಿಂದ ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇರೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು. ಇತ್ತೀಚೆಗೆ ನಾಕೂರು ಶಿರಂಗಾಲ ಗ್ರಾಪಂ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ಮತಾಂತರ ಮಾಡಲು ತಮಿಳುನಾಡಿನಿಂದ ಬಂದು ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಗಿ ಇಲ್ಲದೆ ಅನಧಿಕೃತವಾಗಿ ಚರ್ಚ್ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರಿಗೆ ಪ್ರತ್ಯೇಕವಾಗಿ ಮನವಿಪತ್ರ ಸಲ್ಲಿಸಲಾಯಿತು.

ತಮಿಳುನಾಡಿನಿಂದ ವಾಹನದಲ್ಲಿ ಬಂದು ಹೇರೂರು ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಮತಾಂತರ ಮಾಡುವುದರ ಜೊತೆಗೆ ಪರವಾನಗಿ ಇಲ್ಲದೆ ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ವ್ಯಕ್ತಿಯೊಬ್ಬರ ನೇತೃತ್ವದಲ್ಲಿ ಚರ್ಚ್ಅನ್ನು ನಿರ್ಮಾಣ ಮಾಡಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಅಲ್ಲಿರುವ ಕೆಲವು ಮನೆಗಳಿಗೆ ತೆರಳಿ ಬುಡಕಟ್ಟು ಮತ್ತು ಸ್ಥಳೀಯರನ್ನು ಮತಾಂತಗೊಳಿಸಲು ಪ್ರಯತ್ನಿಸಿದಾಗ ವಿಷಯ ತಿಳಿದು ಗ್ರಾಮಸ್ಥರು ಕೂಡಲೇ ಸುಂಟಿಕೊಪ್ಪ ಠಾಣೆಗೆ ದೂರು ನೀಡಿದ್ದೇವೆ. ಹಣದ ಆಮಿಷ ಒಡ್ಡಿ ಬುಡಕಟ್ಟಿನ ಮುಗ್ಧ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಗ್ಗೆ ಪರಿಶೀಲಿಸಿ ಸರ್ಕಾರಿ ಜಾಗದಲ್ಲಿ ಪಂಚಾಯಿತಿ ಪರವಾನಗಿ ಇಲ್ಲದೆ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಚರ್ಚ್ ಅನ್ನು ತೆರವುಗೊಳಿಸಿ ಹೊರ ರಾಜ್ಯದಿಂದ ಬಂದು ಇಲ್ಲಿಯವರೊಂದಿಗೆ ಸೇರಿಕೊಂಡು ಮತಾಂತರ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ಮುಖಂಡ ಚಂದ್ರಶೇಖರ್ ಹೇರೂರು, ರಾಜೀವ್ ಕುಶಾಲನಗರ, ಗ್ರಾಪಂ ಮಾಜಿ ಅಧ್ಯಕ್ಷ ಜಗನಾಥ್ ಮಂದೊಡಿ, ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ವಸಂತ ಬಿ.ಎಸ್., ಕಾರ್ಯದರ್ಶಿ ನಂಜೇಗೌಡ, ಊರಿನ ಪ್ರಮುಖರಾದ ಅರುಣ್ ಚೆಂಗಪ್ಪ, ಡಿಸಂತ್, ಸುನೀಲ್ ಬ.ಎಸ್., ಗಣೇಶ್ ಕೆ.ಎಸ್., ರಮೇಶ್ ಕೆ.ಎಸ್., ರೇಣುಕುಮಾರ್ ಬಿ. ಎಸ್., ಜಯಪ್ರಕಾಶ್ ಸಿ.ಎಂ., ರಂಜನ್ ಬಿ.ಎಸ್., ಚರಣ್ ತೆಕ್ಕಡೆ, ಜಗತ್, ಅಪ್ಪುನು, ಪೃಥ್ವಿರಾಜ್ ಮತ್ತು ಡಯಾನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಶಕ್ತಿಗೆ ಗಾಂಧಿ ಚಿಂತನೆಗಳೇ ದಾರಿ ತೋರಲಿವೆ
ಜಮಖಂಡಿ ಕ್ಷೇತ್ರದ 23 ಗ್ರಾಮಗಳಲ್ಲಿ ನೀರಿನ ಸಮಸ್ಯೆ:ಶಾಸಕ ಜಗದೀಶ ಗುಡಗುಂಟಿ