ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ

KannadaprabhaNewsNetwork |  
Published : Nov 15, 2026, 02:45 AM IST
14ಕೆಪಿಆರ್‌ಸಿಆರ್ 10:  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಡಿ.2ರಿಂದ 11ರವರೆಗೆ ನಗರದ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಕಲ್ಪಿಸಲು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಸಕಲ ಸಿದ್ಧತೆ ಮಾಡಿಕೊಂಡಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಡಿ.2ರಿಂದ 11ರವರೆಗೆ ನಗರದ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಕಲ್ಪಿಸಲು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಸಕಲ ಸಿದ್ಧತೆ ಮಾಡಿಕೊಂಡಿದೆ.

ಅಧಿವೇಶನದ 10 ದಿನಗಳ ಅವಧಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಸುವರ್ಣಸೌಧ ಸೇರಿದಂತೆ ನಗರದ ಪ್ರಮುಖ ಪ್ರದೇಶಗಳ ವಿದ್ಯುತ್ ವಿತರಣಾ ವ್ಯವಸ್ಥೆಯ ನಿರ್ವಹಣೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ವಿದ್ಯುತ್ ಮಾರ್ಗಗಳ ಪರಿಶೀಲನೆ, ಅಗತ್ಯ ದುರಸ್ತಿ ಹಾಗೂ ತಾಂತ್ರಿಕ ನಿರ್ವಹಣಾ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ.

ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ವತಿಯಿಂದ ಈ ವಾರ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ನ.14ರಂದು ಸುವರ್ಣಸೌಧದ ಫೀಡರ್‌ಗಳಿಗೆ ಸಂಬಂಧಿಸಿದ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಕುರಿತು ಮುಂಚಿತವಾಗಿಯೇ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು.

ಸುವರ್ಣಸೌಧಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಸವೇಶ್ವರ ವೃತ್ತ, ಹರಿಕಾಕಾ ಕಾಂಪೌಂಡ್ ಹಾಗೂ ಯಡಿಯೂರಪ್ಪ ರಸ್ತೆ ಫೀಡರ್‌ಗಳ ಸಮಗ್ರ ಪರಿಶೀಲನೆ ಮತ್ತು ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ದೋಷ ಉಂಟಾಗದಂತೆ ವಿದ್ಯುತ್ ವಿತರಣಾ ಜಾಲವನ್ನು ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ.

ಸುವರ್ಣಸೌಧದ ವಿದ್ಯುತ್ ಬಳಕೆಯ ಬಿಲ್‌ಗಳನ್ನು ನಿಗದಿತ ಅವಧಿಯಲ್ಲಿ ನಿಯಮಿತವಾಗಿ ಪಾವತಿಸಲಾಗುತ್ತಿದೆ. ಈ ಸಂಬಂಧ ಯಾವುದೇ ಸಮಸ್ಯೆ ಇಲ್ಲ. ವಿದ್ಯುತ್ ಸಂಪರ್ಕವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಿಲ್ಲ ಎಂದು ಹೆಸ್ಕಾಂ ಸ್ಪಷ್ಟಪಡಿಸಿದೆ.

ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಸ್ಪಂದಿಸಿ ವಿದ್ಯುತ್ ಪೂರೈಕೆ ಪುನಃಸ್ಥಾಪಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ನದ್ಧಗೊಳಿಸಲಾಗಿದೆ. ಅಧಿವೇಶನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲ ವಿದ್ಯುತ್ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಚಳಿಗಾಲದ ಅಧಿವೇಶನಕ್ಕೆ ಯಾವುದೇ ಅಡಚಣೆಯಿಲ್ಲದೆ ನಿರಂತರ, ಗುಣಮಟ್ಟದ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಕಲ್ಪಿಸುವುದು ಹೆಸ್ಕಾಂನ ಪ್ರಮುಖ ಆದ್ಯತೆಯಾಗಿದೆ. ವಿದ್ಯುತ್ ವ್ಯತ್ಯಯಕ್ಕೆ ಅವಕಾಶವಾಗದಂತೆ ಹೆಸ್ಕಾಂ ಹಾಗೂ ಕೆಪಿಟಿಸಿಎಲ್‌ನಿಂದ ಅಗತ್ಯ ನಿರ್ವಹಣೆ, ತಾಂತ್ರಿಕ ಪರಿಶೀಲನೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

- ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹೇಮಂತ್ ಎನ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ