ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಪಟ್ಟಣದ ಹೊರ ವಲಯದ ಹನುಮಂತಪುರ ಗ್ರಾಮದ ಬಳಿ ನಡೆಯುತ್ತಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಸ್ಥಳಕ್ಕೆ ಶುಕ್ರವಾರ ಆಗಮಿಸಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶಿಡ್ಲಘಟ್ಟದಲ್ಲಿ ನಡೆಯುತ್ತಿರುವ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಸುಮಾರು 2 ವರ್ಷದೊಳಗೆ ಮುಗಿಯುವ ವಿಶ್ವಾಸ ಇದೆ ಎಂದರು.ಪ್ರಸ್ತುತ ಶಿಡ್ಲಘಟ್ಟದ ರೇಷ್ಮೆಗೂಡು ಮಾರುಕಟ್ಟೆಯ ಸಾಮರ್ಥ್ಯ ಸುಮಾರು 50 ಟನ್ ಮಾತ್ರವಿದ್ದು, ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಾರುಕಟ್ಟೆಯನ್ನು 120 ಟನ್ ಸಾಮರ್ಥ್ಯ ಹೊಂದುವಂತೆ ವಿನ್ಯಾಸಗೊಳಿಸಲಾಗುತ್ತಿದೆ. ಇದರಿಂದ ಹೆಚ್ಚಿನ ಪ್ರಮಾಣದ ರೇಷ್ಮೆಗೂಡುಗಳ ವಹಿವಾಟು ಸುಗಮವಾಗಿ ನಡೆಯಲು ಸಾಧ್ಯವಾಗಲಿದೆ. ಈಗಗಲೇ ಹಾವೇರಿ, ಕಲ್ಬುರ್ಗಿ ಮತ್ತು ಮೈಸೂರಲ್ಲಿ 15-20 ಕೋಟಿ ರು. ವೆಚ್ಚದಲ್ಲಿ ಸಣ್ಣ ಮಾರುಕಟ್ಟೆ ನಿರ್ಮಾಣವಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಪ್ರಭು ಜಿ. ಮಾತನಾಡಿ, ಶಿಡ್ಲಘಟ್ಟದಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಮುಂದಿನ ದಿನಗಳಲ್ಲಿ ದೇಶದ ಮಟ್ಟದಲ್ಲಿ ಮಾದರಿಯಾಗುವಂತಹ ಕೇಂದ್ರವಾಗಿ ಬೆಳೆಯಲಿದೆ. ಶಿಡ್ಲಘಟ್ಟವು ಬೆಂಗಳೂರು ನಗರಕ್ಕೆ ಸಮೀಪದಲ್ಲಿರುವುದರಿಂದ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯು ಕೈಗಾರಿಕೆಗಳ ಬೆಳವಣಿಗೆಗೆ ಉತ್ತಮ ಅವಕಾಶ ಹೊಂದಿರುವುದರಿಂದ ಇಲ್ಲಿ ನಿರ್ಮಾಣವಾಗುತ್ತಿರುವ ಈ ಮಾರುಕಟ್ಟೆ ಭವಿಷ್ಯದಲ್ಲಿ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು. ಮಾರುಕಟ್ಟೆ ಕಾಮಗಾರಿ ಪರಿಶೀಲನೆ ವೇಳೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ತಹಸೀಲ್ದಾರ್ ಗಗನ ಸಿಂಧು, ಸಿಬ್ಬಂದಿ ಉಪಸ್ಥಿತರಿದ್ದರು.
ಕೋಟ್.......ಭಾರತದಲ್ಲೇ ಮೊದಲ ಬಾರಿಗೆ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಆಟೋಮೇಟೆಡ್ ಕನ್ವೇಯರ್ ಸಿಸ್ಟಮ್ ಅಳವಡಿಸಲಾಗುತ್ತಿದ್ದು, ಇದರ ಮೂಲಕ ರೇಷ್ಮೆಗೂಡುಗಳ ಸಾಗಣೆ ಹಾಗೂ ಹರಾಜು ಪ್ರಕ್ರಿಯೆ ಹೆಚ್ಚು ವೇಗವಾಗಿ ಮತ್ತು ಪಾರದರ್ಶಕವಾಗಿ ನಡೆಯಲಿದೆ.ಶಿಲ್ಪಾ ನಾಗ್, ರೇಷ್ಮೆ ಕೃಷಿ ಅಭಿವೃದ್ದಿ ಆಯುಕ್ತೆ, ರೇಷ್ಮೆ ನಿರ್ದೇಶಕಿಸುದ್ದಿ ಚಿತ್ರ ೧ ಪಟ್ಟಣದ ಹೊರ ವಲಯದ ಹನುಮಂತಪುರ ಗ್ರಾಮದ ಬಳಿ ನಡೆಯುತ್ತಿರುವ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಸ್ಥಳಕ್ಕೆ ಶುಕ್ರವಾರ ಆಗಮಿಸಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ರೇಷ್ಮೆ ಕೃಷಿ ಅಭಿವೃದ್ದಿ ಆಯುಕ್ತೆ ಹಾಗೂ ರೇಷ್ಮೆ ನಿರ್ದೇಶಕಿ ಶಿಲ್ಪಾ ನಾಗ್